ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ಬರ ಹಿನ್ನೆಲೆ..ಜಿಲ್ಲೆಗೆ 25 ಸಾವಿರ ಮೇವಿನ ಕಿಟ್ ವಿತರಣೆಗೆ ಕ್ರಮ

ಚಾಮರಾಜನಗರ : ಜಿಲ್ಲೆಯ ಐದು ತಾಲೂಕುಗಳು ಬರಪೀಡಿತವಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಅಭಾವ ಉಂಟಾಗದಂತೆ 25 ಸಾವಿರ ಮೇವಿನ ಕಿಟ್‌ಗಳನ್ನು ಜಿಲ್ಲೆಗೆ ವಿತರಿಸಲಾಗುತ್ತಿದೆ. ಅಗತ್ಯ ಬಿದ್ದಲ್ಲಿ ಇನ್ನೂ 20 ಸಾವಿರ ಮೇವಿನ ಕಿಟ್‌ಗಳನ್ನು ಸಹ ನೀಡಲಾಗುತ್ತದೆ ಎಂದು ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.

ಗುಂಡ್ಲುಪೇಟೆ ಪಟ್ಟಣದ ಗುರುಭವನದಲ್ಲಿ ಶನಿವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ ಪ್ರಜಾಸೇವಾ ಆಂದೋಲನ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದ ಹಲವು ಭಾಗಗಳಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಲು ₹25 ಕೋಟಿ ನೀಡಲಾಗಿದೆ. ಮೇವಿನ ಸಮಸ್ಯೆ ನೀಗಿಸಲು ಮೇವಿನ ಕಿಟ್‌ಗಳನ್ನು ವಿತರಿಸಲಾಗುತ್ತಿದೆ. ಚಾಮರಾಜನಗರ ಜಿಲ್ಲೆಯಲ್ಲೂ ಮೇವಿನ ಕಿಟ್‌ಗಳನ್ನು ವಿತರಿಸಲಾಗುತ್ತಿದ್ದು, ಇದನ್ನು ಬಳಸಿಕೊಂಡು ದನ-ಕರುಗಳಿಗೆ ಮೇವು ಬೆಳೆದುಕೊಳ್ಳಬಹುದು ಎಂದು ಸಚಿವರು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

19/09/2026 06:02 pm

Cinque Terre

1.28 K

Cinque Terre

0

ಸಂಬಂಧಿತ ಸುದ್ದಿ