ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ : ಕ್ರೀಡೆಯಿಂದ ಮಕ್ಕಳ ಮಾನಸಿಕ, ದೈಹಿಕ ಸಾಮರ್ಥ್ಯ ಹೆಚ್ಚಳ..ಸರಸ್ವತಿ

ಶಿರಸಿ : ಕ್ರೀಡೆಯಿಂದ ಮಕ್ಕಳಲ್ಲಿನ ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯ ಹೆಚ್ಚುತ್ತದೆ. ಸೋಲು-ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವಿಕೆ ಮುಖ್ಯ ಎಂದು ಸ್ಕೋಡ್ ವೆಸ್ ಸಂಸ್ಥೆಯ ಕಾರ್ಯದರ್ಶಿ ಸರಸ್ವತಿ ಎನ್. ರವಿ ಹೇಳಿದರು.

ಸ್ಕೋಡ್ ವೆಸ್ ಸಂಸ್ಥೆ ಹಾಗೂ ಬೆಂಗಳೂರಿನ ಟ್ರೆಲ್ಲೆಬೋರ್ಗ್ ಪ್ರೈ. ಲಿ. ಆಶ್ರಯದಲ್ಲಿ ನಗರದ ಲಯನ್ಸ್ ಶಾಲಾ ಸಭಾಭವನದಲ್ಲಿ ಆಯೋಜಿಸಿದ್ದ ಕ್ರೀಡಾ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕ್ರೀಡಾ ತರಬೇತಿ ಯೋಜನೆಯಡಿ ಶಿರಸಿ ಹಾಗೂ ಯಲ್ಲಾಪುರ ತಾಲೂಕಿನ ಸುಮಾರು 1,500 ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಹಂತಗಳಲ್ಲಿ ತರಬೇತಿ ನೀಡಲಾಗಿದೆ ಎಂದು ಹೇಳಿದರು.

ಅಲ್ಲದೆ, ಶಿರಸಿ ತಾಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಸುಮಾರು 250 ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರ, ಶೂ, ನೀರಿನ ಬಾಟಲಿ, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಹಾಗೂ ಬ್ಯಾಗ್ ಒಳಗೊಂಡ ಕ್ರೀಡಾ ಕಿಟ್‌ಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದರು.

ಗ್ರಾಮೀಣ ಹಾಗೂ ಹಿಂದುಳಿದ ಬುಡಕಟ್ಟು ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಲು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಲಯನ್ಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರಭಾಕರ ಹೆಗಡೆ ಮಾತನಾಡಿ, ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಸಿಗುವ ಪ್ರೋತ್ಸಾಹ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೆ.ಬಿ. ಲೋಕೇಶ್ ಹೆಗಡೆ, ವಿನಯ ಹೆಗಡೆ ಸೇರಿದಂತೆ ದೈಹಿಕ ಶಿಕ್ಷಣ ಶಿಕ್ಷಕರಾದ ಗಣಪತಿ ಗೌಡ, ದಿನೇಶ್ ನೇತ್ರೇಕರ್, ಪ್ರಶಾಂತ ಗಾಂವ್ಕರ್, ನಾಗರಾಜ ಜೋಗಳೇಕರ್ ಉಪಸ್ಥಿತರಿದ್ದರು.

ನಾರಾಯಣ ಹೆಗಡೆ ಸ್ವಾಗತಿಸಿದರು. ಸೂರ್ಯ ಕಾರ್ಯಕ್ರಮ ನಿರ್ವಹಿಸಿದರು.

Edited By : PublicNext Desk
Kshetra Samachara

Kshetra Samachara

19/09/2026 06:24 pm

Cinque Terre

2.44 K

Cinque Terre

0

ಸಂಬಂಧಿತ ಸುದ್ದಿ