ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಧಕ ವೈದ್ಯ ಡಾ. ಮಹೇಶ್ ಬ್ಯಾಕೋಡಿ ಅವರಿಗೆ ಪಬ್ಲಿಕ್ ನೆಕ್ಸ್ಟ್ ಅಚೀವರ್ಸ್ ಅವಾರ್ಡ್: ಸಾಧಕರ ಸಾಧನೆ ಅನಾವರಣ

ಹುಬ್ಬಳ್ಳಿ : ಡಿಜಿಟಲ್ ಮಾಧ್ಯಮದಲ್ಲಿಯೇ ಮುಂಚೂಣಿಯಲ್ಲಿರುವ ಪಬ್ಲಿಕ್ ನೆಕ್ಸ್ಟ್ ಮಾಧ್ಯಮವು ಸಾಧಕರ ಸಾಧನೆಯನ್ನು ಗುರುತಿಸಿ ಗೌರವಿಸುವ ಕಾರ್ಯವನ್ನು ಮಾಡುತ್ತ ಬಂದಿದೆ. ಈ ನಿಟ್ಟಿನಲ್ಲಿ ಪಬ್ಲಿಕ್ ನೆಕ್ಸ್ಟ್ ಅಚೀವರ್ಸ್ ಅವಾರ್ಡ್-2026 ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದೆ.

ಹುಬ್ಬಳ್ಳಿಯ ಧನ್ವಂತರಿ ಕ್ಲಿನಿಕ್ ಮೂಲಕ ಆಯುರ್ವೇದ ಚಿಕಿತ್ಸೆ ನೀಡಿ ಜನಸೇವೆ ಹಾಗೂ ಜನಪರ ಕಾಳಜಿಯ ಕಾರ್ಯವನ್ನು ಪರಿಗಣಿಸಿ ಡಾ. ಮಹೇಶ್ ಬ್ಯಾಕೋಡಿ ಅವರಿಗೆ ಪಬ್ಲಿಕ್ ನೆಕ್ಸ್ಟ್ ಅಚೀವರ್ಸ್ ಅವಾರ್ಡ್-2026 ಪ್ರಶಸ್ತಿ ನೀಡಿ ಗೌರವಿಸಿದೆ.

ಹುಬ್ಬಳ್ಳಿಯ ಅಮರಗೋಳದಲ್ಲಿರುವ ರಾಯಲ್ ರಿಡ್ಜ್ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ರಾಜ್ಯಸಭಾ ಸಂಸದರಾದ ಪ್ರೊ. ಎಂ. ನಾಗರಾಜ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಹೇಶ ಟೆಂಗಿನಕಾಯಿ, ಸ್ವರ್ಣ ಗ್ರೂಪ್ ಆಫ್ ಕಂಪನಿಯ ಚೇರ್ಮನ್ ಆ್ಯಂಡ್ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಸಿ.ಎಚ್.ವಿ.ಎಸ್.ವಿ. ಪ್ರಸಾದ್, ಪಬ್ಲಿಕ್ ನೆಕ್ಸ್ಟ್ ಮುಖ್ಯಸ್ಥರಾದ ರಾಘವೇಂದ್ರ ರಾವ್, ಮಂಜುನಾಥ ರಾವ್ ಅವರು ಪ್ರಶಸ್ತಿ ಪ್ರದಾನ ಮಾಡುವ ಮೂಲಕ ಸಾಧಕರ ಸಾಧನೆಯ ಅನಾವರಣ ಕಾರ್ಯ ಮಾಡಿರುವುದು ವಿಶೇಷವಾಗಿದೆ.

Edited By : Vinayak Patil
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

19/09/2026 06:28 pm

Cinque Terre

6.03 K

Cinque Terre

0

ಸಂಬಂಧಿತ ಸುದ್ದಿ