ಹುಬ್ಬಳ್ಳಿ : ಡಿಜಿಟಲ್ ಮಾಧ್ಯಮದಲ್ಲಿಯೇ ಮುಂಚೂಣಿಯಲ್ಲಿರುವ ಪಬ್ಲಿಕ್ ನೆಕ್ಸ್ಟ್ ಮಾಧ್ಯಮವು ಸಾಧಕರ ಸಾಧನೆಯನ್ನು ಗುರುತಿಸಿ ಗೌರವಿಸುವ ಕಾರ್ಯವನ್ನು ಮಾಡುತ್ತ ಬಂದಿದೆ. ಈ ನಿಟ್ಟಿನಲ್ಲಿ ಪಬ್ಲಿಕ್ ನೆಕ್ಸ್ಟ್ ಅಚೀವರ್ಸ್ ಅವಾರ್ಡ್-2026 ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದೆ.
ರಾಘವೇಂದ್ರ ಎಂ. ಆನೇಗುಂದಿ ಅವರು ಪ್ರೆಸ್ಟೀಜ್ ಇನ್‌ಸ್ಟಿಟ್ಯೂಟ್ ಸ್ಥಾಪಿಸಿ, ವಿದ್ಯಾರ್ಥಿಗಳ ಕನಸಿಗೆ ರೆಕ್ಕೆ ಕಟ್ಟಿ, ಶಿಕ್ಷಣ ಕ್ಷೇತ್ರದಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಉದ್ಯೋಗ ಸೃಷ್ಟಿಸಿ, ಶೈಕ್ಷಣಿಕ ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ ಅವರಿಗೆ ಪಬ್ಲಿಕ್ ನೆಕ್ಸ್ಟ್ ಅಚೀವರ್ಸ್ ಅವಾರ್ಡ್-2026 ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಹುಬ್ಬಳ್ಳಿಯ ಅಮರಗೋಳದಲ್ಲಿರುವ ರಾಯಲ್ ರಿಡ್ಜ್ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ರಾಜ್ಯಸಭಾ ಸಂಸದರಾದ ಪ್ರೊ. ಎಂ. ನಾಗರಾಜ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಹೇಶ ಟೆಂಗಿನಕಾಯಿ, ಸ್ವರ್ಣ ಗ್ರೂಪ್ ಆಫ್ ಕಂಪನಿಯ ಚೇರ್ಮನ್ ಆ್ಯಂಡ್ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಸಿ.ಎಚ್.ವಿ.ಎಸ್.ವಿ. ಪ್ರಸಾದ್, ಪಬ್ಲಿಕ್ ನೆಕ್ಸ್ಟ್ ಮುಖ್ಯಸ್ಥರಾದ ರಾಘವೇಂದ್ರ ರಾವ್, ಮಂಜುನಾಥ ರಾವ್ ಅವರು ಪ್ರಶಸ್ತಿ ಪ್ರದಾನ ಮಾಡುವ ಮೂಲಕ ಸಾಧಕರ ಸಾಧನೆಯ ಅನಾವರಣ ಕಾರ್ಯ ಮಾಡಿರುವುದು ವಿಶೇಷವಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/09/2026 06:29 pm
LOADING...