ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎನ್.ಆರ್.ಪುರ : ಕಸ್ತೂರಿ ರಂಗನ್ ವರದಿ ವಿರುದ್ಧ ಕೆರಳಿದ ಮಲೆನಾಡು: ಸಿಎಂ ಭೇಟಿ ಬೆನ್ನಲ್ಲೇ ಬಾಳೆಹೊನ್ನೂರಿನತ್ತ ಬೃಹತ್ ಪಾದಯಾತ್ರೆ!

ಎನ್.ಆರ್.ಪುರ : ಮಲೆನಾಡಿಗರ ಪಾಲಿಗೆ ಮರಣಶಾಸನವಾಗಿ ಪರಿಣಮಿಸಿರುವ ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು ಮತ್ತು ಅದನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕು ಎಂದು ಆಗ್ರಹಿಸಿ ಬಾಧಿತ ಪ್ರದೇಶಗಳ ಜನರು ಬೃಹತ್ ಪಾದಯಾತ್ರೆ ನಡೆಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಸಂಗಮೇಶ್ವರಪೇಟೆಯಿಂದ ಬಾಳೆಹೊನ್ನೂರಿನವರೆಗೆ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆಯಲ್ಲಿ ಬೃಹತ್ ಸಂಖ್ಯೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಭಾಗವಹಿಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಬಾಳೆಹೊನ್ನೂರಿಗೆ ಆಗಮಿಸಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಖುದ್ದು ಮನವಿ ಸಲ್ಲಿಸಲು ರೈತರು ಕಾಲ್ನಡಿಗೆಯಲ್ಲೇ ಸಾಗಿದ್ದಾರೆ. ಈ ಬೃಹತ್ ಹೋರಾಟಕ್ಕೆ ಸ್ಥಳೀಯ ಜನಪ್ರತಿನಿಧಿಗಳೂ ಕೈಜೋಡಿಸಿದ್ದು, ಶಾಸಕ ಎಚ್.ಡಿ. ತಮ್ಮಯ್ಯ ಹಾಗೂ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಂಡಿದ್ದಾರೆ.

ಖಾಂಡ್ಯ, ಹುಯಿಗೆರೆ, ಜಾಗರ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿರುವ ಅನ್ನದಾತರು, ಕಸ್ತೂರಿ ರಂಗನ್ ವರದಿಯ ದುಷ್ಪರಿಣಾಮಗಳಿಂದ ಮಲೆನಾಡಿನ ಜನಜೀವನ ನಾಶವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Edited By :
PublicNext

PublicNext

19/09/2026 06:37 pm

Cinque Terre

3.9 K

Cinque Terre

0

ಸಂಬಂಧಿತ ಸುದ್ದಿ