ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು : ಗ್ರಾಮ ಪಂಚಾಯಿತಿ ಆವರಣದಲ್ಲೇ ಮೂತ್ರ ವಿಸರ್ಜನೆ ಮಾಡಿದ ಪಿಡಿಒ

ಮೈಸೂರು : ಸ್ವಚ್ಛತೆಗೆ ಮಾದರಿಯಾಗಬೇಕಿದ್ದ ಪಿಡಿಒ ತಮ್ಮ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲೇ ಮೂತ್ರ ವಿಸರ್ಜನೆ ಮಾಡುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ನಂಜನಗೂಡು ತಾಲೂಕಿನ ಹುರಾ ಗ್ರಾಮ ಪಂಚಾಯಿತಿಯ ಪಿಡಿಒ ರಾಘವೇಂದ್ರ ಅವರು ಇಂತಹ ಎಡವಟ್ಟು ಮಾಡಿದ್ದಾರೆ. ತಾವು ಕರ್ತವ್ಯ ನಿರ್ವಹಿಸುವ ಕಚೇರಿಯ ಗೋಡೆಯ ಪಕ್ಕದಲ್ಲೇ ಮೂತ್ರ ವಿಸರ್ಜನೆ ಮಾಡುತ್ತಿರುವ ದೃಶ್ಯವನ್ನು ಸಾರ್ವಜನಿಕರೊಬ್ಬರು ಸೆರೆಹಿಡಿದಿದ್ದಾರೆ.

ಸ್ವಚ್ಛತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜವಾಬ್ದಾರಿ ಹೊಂದಿರುವ ಅಧಿಕಾರಿಯೇ ಈ ರೀತಿ ವರ್ತಿಸಿರುವುದು ಸರಿಯಲ್ಲ ಎಂದು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತಮ್ಮ ಜವಾಬ್ದಾರಿಯನ್ನು ಮರೆತು ವರ್ತಿಸಿರುವ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದೇ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.

Edited By :
Kshetra Samachara

Kshetra Samachara

19/09/2026 06:46 pm

Cinque Terre

640

Cinque Terre

0

ಸಂಬಂಧಿತ ಸುದ್ದಿ