ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ : ಕಾರು ಡಿಕ್ಕಿ..ಪಾದಚಾರಿ ಗಂಭೀರ

ಮುಲ್ಕಿ : ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣದ ಬಳಿಯ ಆರಾರ್ ಟವರ್ಸ್‌ ಬಳಿ ಕಾರು ಡಿಕ್ಕಿಯಾಗಿ ಪಾದಚಾರಿಯೊಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗಾಯಾಳುವನ್ನು ಸ್ಥಳೀಯ ನಿವಾಸಿ ಬಾಬುರಾಯ ಶೆಟ್ಟಿಗಾರ್ (65) ಎಂದು ಗುರುತಿಸಲಾಗಿದೆ.

ಬಾಬುರಾಯ ಶೆಟ್ಟಿಗಾರ್ ಅವರು ತಮ್ಮ ಮನೆಯಿಂದ ಬಪ್ಪನಾಡು ದೇವಸ್ಥಾನಕ್ಕೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ರಸ್ತೆ ಬದಿಯ ಮಣ್ಣಿನ ರಸ್ತೆಯಿಂದ ಮುಖ್ಯ ರಸ್ತೆಗೆ ಬರುತ್ತಿದ್ದಾಗ, ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಕಾರು ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಅಪಘಾತದ ರಭಸಕ್ಕೆ ಬಾಬುರಾಯ ಶೆಟ್ಟಿಗಾರ್ ಅವರು ಕಾರಿನ ಮುಂಭಾಗದ ಗಾಜಿಗೆ ಬಿದ್ದು, ಬಳಿಕ ರಸ್ತೆಗೆ ಬಿದ್ದಿದ್ದಾರೆ. ಪರಿಣಾಮ ತಲೆಯ ಹಿಂಭಾಗ, ಎಡ ತೊಡೆ ಹಾಗೂ ಎಡ ಎದೆಗೆ ಗುದ್ದಿದ ಗಾಯಗಳಾಗಿವೆ. ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಚಾಲಕ ಲಕ್ಷ್ಮಣ್ ವಿರುದ್ಧ ಮಂಗಳೂರು ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
PublicNext

PublicNext

19/09/2026 06:48 pm

Cinque Terre

3.97 K

Cinque Terre

0

ಸಂಬಂಧಿತ ಸುದ್ದಿ