ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಕಸ್ತೂರಿ ರಂಗನ್ ಕಿಚ್ಚಿನ ನಡುವೆ ಮಲೆನಾಡಿಗೆ ಸಿಎಂ ಡಿಕೆಶಿ ಎಂಟ್ರಿ

ಚಿಕ್ಕಮಗಳೂರು: ಮುಖ್ಯಮಂತ್ರಿಯಾದ ಬಳಿಕ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಇದಕ್ಕಾಗಿ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಬಾಳೆಹೊನ್ನೂರು ಶಾಖಾ ಮಠದಲ್ಲಿ ಜಗದ್ಗುರುಗಳ ಭೇಟಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಶ್ರೀಗಳ ಆಗಮನವೂ ಆಗಿದೆ. ಕಾರ್ಯಕ್ರಮದ ವೇದಿಕೆ ಮುಂಭಾಗ ಮೂರು ಸಾವಿರಕ್ಕೂ ಅಧಿಕ ಸ್ಥಳೀಯರು ಹಾಗೂ ರೈತರು ಸೇರಿದಂತೆ ಸಾವಿರಾರು ಸಾರ್ವಜನಿಕರು ಆಸೀನರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಸುಮಾರು 137 ಹಳ್ಳಿಗಳಿಗೆ ಕಸ್ತೂರಿ ರಂಗನ್ ವರದಿ ಜಾರಿಯ ಭೀತಿ ಎದುರಾಗಿದ್ದು, ಇದರ ವಿರುದ್ಧ ಕಳೆದ ಒಂದು ತಿಂಗಳಿಂದ ಮಲೆನಾಡು ಭಾಗದಲ್ಲಿ ರೈತರು ಪ್ರತಿಭಟನೆ ಮತ್ತು ಬಂದ್‌ಗಳನ್ನು ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನ ಭೇಟಿಯ ವೇಳೆ ಮುಖ್ಯಮಂತ್ರಿಗಳು ಕಸ್ತೂರಿ ರಂಗನ್ ವರದಿಯ ಕುರಿತು ಆತಂಕದಲ್ಲಿರುವ ರೈತರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

Edited By :
PublicNext

PublicNext

19/09/2026 07:02 pm

Cinque Terre

3.98 K

Cinque Terre

0

ಸಂಬಂಧಿತ ಸುದ್ದಿ