ಕೂಡ್ಲಿಗಿ : ಪಟ್ಟಣದ ರಾಷ್ಟ್ರೀಯ ಹೆದ್ದಾರಿ-50ರ ಪಾಲಿಟೆಕ್ನಿಕ್ ಕಾಲೇಜು ಬಳಿ ಪಾದಚಾರಿ ಮೇಲ್ಸೇತುವೆ ನಿರ್ಮಾಣಕ್ಕೆ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಮತ್ತು ಸಂಸದ ಇ. ತುಕಾರಾಂ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು. ಹೆದ್ದಾರಿಯಲ್ಲಿ ವಾಹನಗಳು ಅತಿ ವೇಗವಾಗಿ ಸಂಚರಿಸುವುದರಿಂದ ವಿದ್ಯಾರ್ಥಿಗಳು ಜೀವದ ಹಂಗು ತೊರೆದು ರಸ್ತೆ ದಾಟಬೇಕಿತ್ತು. ಈ ಬಗ್ಗೆ ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರು, ಸಂಘಟನೆಗಳು ಪಾದಚಾರಿ ಮೇಲ್ಸೆತುವೆ ನಿರ್ಮಾಣ ಮಾಡಬೇಕು. ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಅಂತ ಬಹುದಿನಗಳಿಂದ ಬೇಡಿಕೆ ಇಟ್ಟಿದ್ದರು. ಬೇಡಿಕೆಗೆ ಸ್ಪಂದಿಸಿದ ಶಾಸಕರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚಿಸಿ ಪಾದಚಾರಿ ಸೇತುವೆ ನಿರ್ಮಾಣ ಮಾಡುವ ಕ್ರಮ ಕೈಗೊಂಡಿದ್ದಾರೆ.
ವಿದ್ಯಾರ್ಥಿಗಳ ಸಮಸ್ಯೆಗೆ ತ್ವರಿತ ಸ್ಪಂದನೆಗೆ ಉಪನ್ಯಾಸಕರು, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದರು. ಮುಂದೆಯೂ ಶಿಕ್ಷಣಕ್ಕೆ ಅಗತ್ಯ ಮೂಲಸೌಕರ್ಯ ಒದಗಿಸಲು ಆದ್ಯತೆ ನೀಡುವುದಾಗಿ ಶಾಸಕರು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜು ಉಪನ್ಯಾಸಕರು, ವಿವಿಧ ಇಲಾಖೆ ಅಧಿಕಾರಿಗಳು, ಮುಖಂಡರು, ವಿದ್ಯಾರ್ಥಿಗಳು ಇದ್ದರು.
Kshetra Samachara
19/09/2026 07:05 pm
LOADING...