ಅಥಣಿ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ, ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರುವ ಉದ್ದೇಶದಿಂದ ಅಥಣಿ ತಾಲೂಕಿನ ಅನಂತಪುರ ಗ್ರಾಮದಲ್ಲಿ ಆಯೋಜಿಸಿದ್ದ ಪ್ರಜಾ ಸೇವಾ ಆಂದೋಲನ ಯಶಸ್ವಿಯಾಗಿ ನಡೆಯಿತು.
ತಾಲೂಕು ದಂಡಾಧಿಕಾರಿ ಸಿದ್ದರಾಯ ಬೋಸಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಂದೋಲನದಲ್ಲಿ ಅನಂತಪುರ ಹೋಬಳಿಯ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಮುಂದೆ ನೇರವಾಗಿ ಮಂಡಿಸಿದರು.
ಕುಡಿಯುವ ನೀರು, ರಸ್ತೆ, ಪಹಣಿ ಪತ್ರಿಕೆ, ವಿದ್ಯುತ್, ವೈದ್ಯಕೀಯ ಸೇವೆ, ಸಾರಿಗೆ ವ್ಯವಸ್ಥೆ, ಪಿಂಚಣಿ ಸೇರಿದಂತೆ ಗ್ರಾಮೀಣ ಜನರು ದಿನನಿತ್ಯ ಎದುರಿಸುತ್ತಿರುವ ಹಲವು ಸಮಸ್ಯೆಗಳು ಅಧಿಕಾರಿಗಳ ಮುಂದೆ ಬಂದವು. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರದ ಭರವಸೆ ದೊರೆತರೆ, ಇನ್ನೂ ಕೆಲವು ಸಮಸ್ಯೆಗಳಿಗೆ ಸಂಬಂಧಿಸಿದ ಇಲಾಖೆಗಳ ಮೂಲಕ ಕ್ರಮ ಕೈಗೊಳ್ಳುವ ಭರವಸೆ ನೀಡಲಾಯಿತು.
ಜನರ ಸಮಸ್ಯೆಗಳನ್ನು ಒಂದೇ ವೇದಿಕೆಯಲ್ಲಿ ಆಲಿಸಿದ ಕಾರಣ ಆಂದೋಲನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಆದರೆ ವರ್ಷಗಳಿಂದ ಬಗೆಹರಿಯದ ಕೆಲ ಸಮಸ್ಯೆಗಳು ಮತ್ತೆ ಅಧಿಕಾರಿಗಳ ಮುಂದೆ ಬಂದಿರುವುದು ‘ಸ್ವಲ್ಪ ಸಿಹಿ, ಸ್ವಲ್ಪ ಕಹಿ’ ಅನುಭವಕ್ಕೆ ಕಾರಣವಾಯಿತು.
PublicNext
19/09/2026 07:15 pm
LOADING...