ರಾಯಚೂರು: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಮೃತರನ್ನು 14 ವರ್ಷದ ಸುಚಿತ್ ಹಾಗೂ 16 ವರ್ಷದ ಚರಣಕುಮಾರ್ ಎಂದು ಗುರುತಿಸಲಾಗಿದೆ. 36 ವರ್ಷದ ವಿಜಯಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಜಹಿರಾಬಾದ್‌ನಿಂದ ನಗರದ ಖಾಸಬಾವಿಗೆ ಗಣೇಶ ವಿಸರ್ಜನೆ ಮೆರವಣಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಟ್ರ್ಯಾಕ್ಟರ್ ಚಾಲಕ ಬ್ರೇಕ್ ಬದಲು ಆಕ್ಸಿಲರೇಟರ್ ಒತ್ತಿದ ಹಿನ್ನೆಲೆಯಲ್ಲಿ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಮೆರವಣಿಗೆಯಲ್ಲಿದ್ದವರ ಮೇಲೆ ಹರಿದಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಇಬ್ಬರು ಬಾಲಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಯಚೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
PublicNext
19/09/2026 07:15 pm
LOADING...