ಎನ್.ಆರ್. ಪುರ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕಾಫಿನಾಡು ಚಿಕ್ಕಮಗಳೂರಿಗೆ ಭೇಟಿ ನೀಡಿದ್ದಾರೆ. ತೀರ್ಥಹಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಅವರು, ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ರಂಭಾಪುರಿ ಮಠದ ಹೆಲಿಪ್ಯಾಡ್‌ಗೆ ಬಂದಿಳಿದರು.
ಈ ಸಂದರ್ಭದಲ್ಲಿ ಜಿಲ್ಲಾಡಳಿತ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಅವರಿಗೆ ಆತ್ಮೀಯ ಸ್ವಾಗತ ಕೋರಿದರು. ಬಳಿಕ ರಂಭಾಪುರಿ ಜಗದ್ಗುರುಗಳ ಆಶೀರ್ವಾದ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಮಾವೇಶಕ್ಕೆ ತೆರಳಿದರು.
ಇದೇ ವೇಳೆ ಕಸ್ತೂರಿ ರಂಗನ್ ವರದಿ ಜಾರಿಯಿಂದಾಗಿ ಆತಂಕದಲ್ಲಿರುವ ಜಿಲ್ಲೆಯ ಸುಮಾರು 137 ಗ್ರಾಮಗಳ ರೈತರನ್ನು ಭೇಟಿಯಾಗಿ, ಅವರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
PublicNext
19/09/2026 07:19 pm
LOADING...