ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಸಿಎಂ ಡಿ.ಕೆ.ಶಿವಕುಮಾರ್

ಶಿವಮೊಗ್ಗ: ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಚುನಾವಣೆ ಸಮಯದಲ್ಲಿ "ಮುಖ್ಯಮಂತ್ರಿಯಾದ ನಂತರ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸುತ್ತೇನೆ" ಎಂದು ಪ್ರಾರ್ಥಿಸಿಕೊಂಡಿದ್ದ ಡಿ.ಕೆ. ಶಿವಕುಮಾರ್ ಅವರು, ಇಂದು ತಮ್ಮ ಪೂರ್ವಭಾವಿ ಸಭೆ ಮುಗಿದ ಬೆನ್ನಲ್ಲೇ ದೇವಾಲಯಕ್ಕೆ ತೆರಳಿ ಹರಕೆ ತೀರಿಸಿದರು.

ದೇವಾಲಯಕ್ಕೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಅರ್ಚಕರು ಮತ್ತು ಆಡಳಿತ ಮಂಡಳಿಯವರು ಆತ್ಮೀಯವಾಗಿ ಸ್ವಾಗತಿಸಿ, ಹಾರ-ತುರಾಯಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು ಸಿಎಂ ಅವರಿಗೆ ಮಂಗಳಾರತಿ ಮಾಡಿ, ಪ್ರಸಾದ ಹಾಗೂ ಶೇಷವಸ್ತ್ರ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರು, ಪ್ರಮುಖ ಜನಪ್ರತಿನಿಧಿಗಳು ಹಾಗೂ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿದ್ದರು.

Edited By : Vinayak Patil
PublicNext

PublicNext

19/09/2026 07:36 pm

Cinque Terre

4.1 K

Cinque Terre

0

ಸಂಬಂಧಿತ ಸುದ್ದಿ