ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎನ್.ಆರ್.ಪುರ:ಕಾಫಿನಾಡಿಗೆ ಡಿಕೆಶಿ ಎಂಟ್ರಿ; ರಂಭಾಪುರಿ ಪೀಠದಲ್ಲಿ ವಿಶೇಷ ಪೂಜೆ, ರೈತರೊಂದಿಗೆ ಕಸ್ತೂರಿ ರಂಗನ್ ಚರ್ಚೆ

ಎನ್.ಆರ್. ಪುರ: ಮುಖ್ಯಮಂತ್ರಿ ಸ್ಥಾನ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಕಾಫಿನಾಡು ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಐತಿಹಾಸಿಕ ರಂಭಾಪುರಿ ಪೀಠಕ್ಕೆ ಭೇಟಿ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ರಂಭಾಪುರಿ ಮಠಕ್ಕೆ ಆಗಮಿಸಿದ ಅವರು, ಕ್ಷೇತ್ರದ ಆರಾಧ್ಯ ದೈವ ಶ್ರೀ ವೀರಭದ್ರಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

​ರಂಭಾಪುರಿ ಮಠದ 119ನೇ ಜಗದ್ಗುರುಗಳಾಗಿದ್ದ ವೀರ ಗಂಗಾಧರ ಅಜ್ಜಯ್ಯನವರ ಪರಮ ಭಕ್ತರಾಗಿರುವ ಡಿ.ಕೆ. ಶಿವಕುಮಾರ್ ಅವರು, ಪ್ರಸ್ತುತ ರಂಭಾಪುರಿ ಜಗದ್ಗುರುಗಳ ಹಾಗೂ ವಿವಿಧ ಶಾಖಾ ಮಠಗಳ ಮಠಾಧೀಶರ ಆಶೀರ್ವಾದ ಪಡೆದುಕೊಂಡ ಅವರು .ಹಿರಿಯ ಸ್ವಾಮೀಜಿಗಳೊಂದಿಗೆ ಹಲವು ಮಹತ್ವದ ವಿಷಯಗಳ ಕುರಿತು ಮಹತ್ವದ ಸಮಾಲೋಚನೆ ನಡೆಸಿದ್ದಾರೆ.

​ಮಠದ ಧಾರ್ಮಿಕ ಕಾರ್ಯಕ್ರಮಗಳ ನಂತರ ಅವರು ನೇರವಾಗಿ ಸಾರ್ವಜನಿಕ ಸಮಾವೇಶಕ್ಕೆ ತೆರಳಿ ಮಲೆನಾಡು ಭಾಗದಲ್ಲಿ ಭಾರಿ ಆತಂಕ ಸೃಷ್ಟಿಸಿರುವ ಕಸ್ತೂರಿ ರಂಗನ್ ವರದಿಯ ಕುರಿತು ರೈತರೊಂದಿಗೆ ಮುಖಾಮುಖಿ ಚರ್ಚಿಸಿ, ಅವರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

Edited By : Vinayak Patil
PublicNext

PublicNext

19/09/2026 07:46 pm

Cinque Terre

4.46 K

Cinque Terre

0

ಸಂಬಂಧಿತ ಸುದ್ದಿ