ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

‘ಗೋ ಬ್ಯಾಕ್ ಅಮಿತ್ ಶಾ’ ಘೋಷಣೆ ; ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಲು ಮುಂದಾದ ಯುವ ಕಾಂಗ್ರೆಸ್ ಕಾರ್ಯಕರ್ತರು ‘ಗೋ ಬ್ಯಾಕ್ ಅಮಿತ್ ಶಾ’ ಎಂದು ಘೋಷಣೆ ಕೂಗಿದ್ದಾರೆ. ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹುಬ್ಬಳ್ಳಿ ನಗರದ ಬಿಡ್ನಾಳ ಕ್ರಾಸ್ ಬಳಿ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಹಾಗೂ ಬಲ ಪ್ರಯೋಗ ಮಾಡಿರುವುದನ್ನು ಪ್ರಶ್ನಿಸಲು ಅಮಿತ್ ಶಾ ಅವರ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದಾಗಿ ಕಾರ್ಯಕರ್ತರು ತಿಳಿಸಿದ್ದಾರೆ.

ಧಾರವಾಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಜುನ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, 30ಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

19/09/2026 08:13 pm

Cinque Terre

12.64 K

Cinque Terre

2

ಸಂಬಂಧಿತ ಸುದ್ದಿ