ಶಿವಮೊಗ್ಗ : 94 ಸಿ ವಿಷಯ ಚರ್ಚೆಗೆ ಪ್ರತ್ಯೇಕ ಸಭೆ ಕರೆಯುತ್ತೇನೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ತೀರ್ಥಹಳ್ಳಿಯಲ್ಲಿ ಮಾತನಾಡಿದ ಅವರು, ಹೊಸದಾಗಿ ಭೌತಿಕ ಸರ್ವೆ, ಇತರೆ ವಿಷಯ ಕುರಿತು ಶಾಸಕರೊಂದಿಗೆ ಚರ್ಚಿಸುತ್ತೇನೆ. ಪರಿಸರ ಸೂಕ್ಷ್ಮ ಪ್ರದೇಶವನ್ನು ರದ್ದುಪಡಿಸುವ ಬಗ್ಗೆ ಕಾನೂನಿನ ವ್ಯಾಪ್ತಿಯನ್ನು ಪರಿಶೀಲಿಸಲಾಗುವುದು, ಅಕ್ರಮ ಸಕ್ರಮ ಕುರಿತು ಪ್ರತಿ ತಿಂಗಳು ಸಭೆ ನಡೆಸಿ ಬಡವರಿಗೆ ಅನುಕೂಲ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ.
ಝೋನಲ್ ಮ್ಯಾನೇಜ್ಮೆಂಟ್ ಪ್ಲಾಂಟೇಷನ್ ಮಾಡಲು, ಸಂಜೀವ್ ಕುಮಾರ್ ವರದಿ ಬಗ್ಗೆ, 371 ವಿಶೇಷ ಸ್ಥಾನ ನೀಡುವ ಬಗ್ಗೆ ಸಲಹೆಗಳು ಬಂದಿದ್ದು ಚರ್ಚಿಸುತ್ತೇನೆ. ಹೊಸ ನೋಟಿಸ್ ಯಾವ ರೈತನಿಗೆ ಕೊಡಬಾರದು ಮತ್ತು ಹೊಸ ಒತ್ತುವರಿಗೂ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
PublicNext
19/09/2026 08:35 pm
LOADING...