ಕಲಘಟಗಿ: ಬಡವರ ಹಸಿವು ನೀಗಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿ ಗ್ರಾಮೀಣ ಭಾಗದ ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
ಕಲಘಟಗಿ ತಾಲೂಕಿನ ಚೆಳಮಟ್ಟಿ ಗ್ರಾಮದಲ್ಲಿ ಅನ್ನಭಾಗ್ಯ ಯೋಜನೆಯಡಿ ನೀಡಲಾಗುವ ಪಡಿತರ ಅಕ್ಕಿಯನ್ನು ಸಮರ್ಪಕವಾಗಿ ವಿತರಿಸುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಿಂಗಳಿಗೆ ಕೇವಲ ಒಂದು ದಿನ ಪಡಿತರ ವಿತರಿಸಲಾಗುತ್ತಿದ್ದು, ಆ ದಿನವೂ ಜನರಿಗೆ ಅಕ್ಕಿ ಸರಿಯಾಗಿ ಸಿಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಪ್ರತಿತಿಂಗಳು ಹೆಬ್ಬೆಟ್ಟಿನ ಗುರುತು ಪಡೆದುಕೊಂಡರೂ ಪಡಿತರ ಅಕ್ಕಿ ನೀಡದೆ ಸತಾಯಿಸಲಾಗುತ್ತಿದೆ ಎಂದು ಅವರು ದೂರಿದ್ದಾರೆ.
ಅಲ್ಲದೆ, ಪ್ರತಿ ಬಾರಿ ಒಂದು ರೇಷನ್ ಕಾರ್ಡ್‌ಗೆ ಒಂದರಿಂದ ಎರಡು ಕೆಜಿ ಅಕ್ಕಿ ಕಡಿಮೆ ನೀಡಲಾಗುತ್ತಿದೆ. ತೂಕದಲ್ಲಿಯೂ ವಂಚನೆ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗೆ ಅಲೆದಾಡಿ ಬೇಸತ್ತು ಹೋಗಿರುವ ಗ್ರಾಮಸ್ಥರು, “ನಮಗೆ ನ್ಯಾಯ ದೊರಕಿಸಿಕೊಡಿ” ಎಂದು ಪಬ್ಲಿಕ್ ನೆಕ್ಸ್ಟ್ ವಾಹಿನಿಯ ಮೂಲಕ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಈ ಸಮಸ್ಯೆ ಕೇವಲ ಚೆಳಮಟ್ಟಿ ಗ್ರಾಮಕ್ಕೆ ಸೀಮಿತವಾಗಿಲ್ಲ. ಕಲಘಟಗಿ ತಾಲೂಕಿನ ಹಲವು ಗ್ರಾಮಗಳಲ್ಲಿಯೂ ಇಂತಹ ಸಮಸ್ಯೆಗಳು ಎದುರಾಗುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಸಂಬಂಧಿಸಿದ ಅಧಿಕಾರಿಗಳು ಕೂಡಲೇ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಫಲಾನುಭವಿಗಳಿಗೆ ಸಮರ್ಪಕವಾಗಿ ಪಡಿತರ ವಿತರಿಸುವಂತೆ ಕ್ರಮ ಕೈಗೊಳ್ಳುತ್ತಾರ ಕಾದು ನೋಡಬೇಕಾಗಿದೆ.
ವರದಿ: ಉದಯ ಗೌಡರ
ಪಬ್ಲಿಕ್ ನೆಕ್ಸ್ಟ್, ಕಲಘಟಗಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/09/2026 08:59 pm
LOADING...