ಶಿರಸಿ: ತಾಲೂಕಿನ ಹುಲೇಕಲ್ ಹೋಬಳಿಯ ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ, ಶಾಸಕರಾದ ಭೀಮಣ್ಣ ಟಿ. ನಾಯ್ಕ ಅವರ ಅಧ್ಯಕ್ಷತೆಯಲ್ಲಿ ಶನಿವಾರ "ಪ್ರಜಾಸೇವಾ ಆಂದೋಲನ" ಕಾರ್ಯಕ್ರಮ ಯಶಸ್ವಿಯಾಗಿ ಜರಗಿತು.
ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲ್ಪಟ್ಟ ಒಟ್ಟು 405 ಅರ್ಜಿಗಳನ್ನು ತಕ್ಷಣವೇ ಸಂಬಂಧಪಟ್ಟ ಇಲಾಖೆಗಳಿಗೆ ಆನ್‌ಲೈನ್ ಮೂಲಕ ಅಪ್‌ಲೋಡ್ ಮಾಡಿ, ಸೂಕ್ತ ನಮೂದನೆಯೊಂದಿಗೆ ವಿಲೇವಾರಿಗೆ ಕ್ರಮ ಕೈಗೊಳ್ಳಲಾಯಿತು.
ನಿಜಾ ಸೇವೆ ಆಂದೋಲನ ಉದ್ದೇಶಿಸಿ ಮಾತನಾಡಿದ ಶಾಸಕರು, "ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಸರ್ಕಾರಿ ಸೌಲಭ್ಯಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ತಲುಪಬೇಕು ಎಂಬುದು ನಮ್ಮ ಆದ್ಯತೆಯಾಗಿದೆ. ಅಧಿಕಾರಿಗಳು ಈ ಅರ್ಜಿಗಳನ್ನು ಆದಷ್ಟು ಬೇಗ ಪರಿಶೀಲಿಸಿ, ನಿಗದಿತ ಸಮಯದಲ್ಲಿ ಪರಿಹಾರ ಒದಗಿಸಬೇಕು" ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಸುಮಾ ಉಗ್ರಾಣಕರ, ತಹಶೀಲ್ದಾರ್ ಪಟ್ಟ ರಾಜಗೌಡ, ಪಾಪಂ ಇ ಓ ಚನ್ನಬಸಪ್ಪ ಹಾವನಗಿ, ಸಿ ಡಿ ಪಿ ಓ ನಂದಕುಮಾರ್
ಹೋಬಳಿ ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
Kshetra Samachara
19/09/2026 09:25 pm
LOADING...