ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ: ರೈತರಿಂದ ‘ಪೊರಕೆ ಚಳವಳಿ’ - ಕೆರೆಗಳಿಗೆ ನೀರು ತುಂಬಿಸಲು ಆಗ್ರಹ.!

ಚಾಮರಾಜನಗರ: ತಾಲೂಕಿನ ಕೆರೆಗಳಿಗೆ ತಕ್ಷಣವೇ ನೀರು ತುಂಬಿಸುವುದು ಸೇರಿದಂತೆ ವಿವಿಧ ಹಕ್ಕುಬಾಧ್ಯತೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಗುಂಡ್ಲುಪೇಟೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ 'ಪೊರಕೆ ಚಳವಳಿ' ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ಕೆರೆಗಳಿಗೆ ನೀರು ಹರಿಸದಿರುವುದು ಹಾಗೂ ಅರ್ಹ ರೈತರಿಗೆ ಸಾಗುವಳಿ ಪತ್ರ ವಿತರಿಸುವಲ್ಲಿ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸರ್ಕಾರ ಮತ್ತು ತಾಲೂಕು ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದರು.

ರೈತರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗದಿದ್ದರೆ ಅಧಿಕಾರಿಗಳು ತಕ್ಷಣವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ ರೈತ ಮುಖಂಡರು, ಬಾಕಿ ಉಳಿದಿರುವ ಬೇಡಿಕೆಗಳನ್ನು ಶೀಘ್ರವೇ ಈಡೇರಿಸದಿದ್ದರೆ ಮುಂಬರುವ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

Edited By :
PublicNext

PublicNext

19/09/2026 09:40 pm

Cinque Terre

4.51 K

Cinque Terre

0

ಸಂಬಂಧಿತ ಸುದ್ದಿ