ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ವಂದೇ ಮಾತರಂ ವಿಚಾರಕ್ಕೆ ತೀರ್ಥಹಳ್ಳಿ ಸಭೆಯಲ್ಲಿ ಗದ್ದಲ ; ಸಿಎಂ ಮುಂದೆಯೇ ಶಾಸಕ ಚನ್ನಬಸಪ್ಪ ಆಕ್ಷೇಪ

ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಶನಿವಾರ ಆಯೋಜಿಸಿದ್ದ ಸಾರ್ವಜನಿಕರೊಂದಿಗೆ ಮುಖ್ಯಮಂತ್ರಿ ನೇರ ಸಂವಾದ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯ ವಿಚಾರವಾಗಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಯು.ಆರ್. ಅನಂತಮೂರ್ತಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭಾಗವಹಿಸಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ವಂದೇ ಮಾತರಂ ಗೀತೆಯ ಎರಡು ಚರಣಗಳನ್ನು ಹಾಡಲಾಗಿತ್ತು. ಇದಕ್ಕೆ ಶಿವಮೊಗ್ಗ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ವೇದಿಕೆಯಲ್ಲೇ ಆಕ್ಷೇಪ ವ್ಯಕ್ತಪಡಿಸಿದರು.

ವಂದೇ ಮಾತರಂ ಗೀತೆಯನ್ನು ಪೂರ್ಣವಾಗಿ ಹಾಡಬೇಕು. ಕೇವಲ ಎರಡು ಚರಣಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ ಎಂದು ಚನ್ನಬಸಪ್ಪ ಅವರು ಸಿಎಂ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲೇ ಪ್ರಶ್ನಿಸಿದರು.

ಈ ವೇಳೆ ವೇದಿಕೆಯಲ್ಲಿದ್ದ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು. ಚನ್ನಬಸಪ್ಪ ಅವರ ಆಕ್ಷೇಪಕ್ಕೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಕಾಂಗ್ರೆಸ್ ಮುಖಂಡರು ಪ್ರತಿಕ್ರಿಯಿಸಿದರು.

ಕೆಲಕಾಲ ವೇದಿಕೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಬಳಿಕ ಮುಖಂಡರು ಚನ್ನಬಸಪ್ಪ ಅವರನ್ನು ಮನವೊಲಿಸಿ ಅವರ ಭಾಷಣವನ್ನು ನಿಲ್ಲಿಸಿದರು.

ಇತ್ತ ಕಾರ್ಯಕ್ರಮದ ಮೈದಾನದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ‘ಡಿಕೆ, ಡಿಕೆ’ ಎಂದು ಘೋಷಣೆ ಕೂಗಿದರು. ಇದರಿಂದ ಸಭಾಂಗಣದಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು. ಬಳಿಕ ಕಾರ್ಯಕ್ರಮ ಮುಂದುವರಿಯಿತು.

Edited By :
PublicNext

PublicNext

19/09/2026 10:00 pm

Cinque Terre

10.32 K

Cinque Terre

2

ಸಂಬಂಧಿತ ಸುದ್ದಿ