ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: 6 ಜನರ ಸಾವು: ಮೃತರ ಕುಟುಂಬಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ, ಸ್ಥಳಕ್ಕೆ ಬಿಜೆಪಿ ನಾಯಕರ ಭೇಟಿ

ಬೆಳಗಾವಿ: ಬೆಳಗಾವಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬ ಆರು ಜನರ ಸಾವನ್ನಪ್ಪಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್ ಅಶೋಕ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

ಬೆಳಗಾವಿ ನಗರದ ಚವ್ಹಾಟ ಗಲ್ಲಿಯಲ್ಲಿರೋ ಮೃತ ಗಜಾನನ ದಮೋನೆ ನಿವಾಸಕ್ಕೆ ಭೇಟಿ ನೀಡಿ, ಘಟಾನ ಸ್ಥಳ ಪರಿಶೀಲಿಸಿದ ಉಭಯ ನಾಯಕರು ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈವರೆಗೂ ಸರ್ಕಾರದಿಂದ ಪರಿಹಾರ ಬಂದಿಲ್ಲ ಎಂದು ಮೃತರ ಕುಟುಂಬಸ್ಥರು ಹೇಳುತ್ತಿದ್ದಂತೆ ಬೆಳಗಾವಿ ಡಿಸಿ ಮಹಮ್ಮದ್ ರೋಷನ್ ಕರೆ ಮಾಡಿ ಮಾಹಿತಿ ಪಡೆದರು.‌

ಇಂತಹ ಪ್ರಕರಣದಲ್ಲಿ ಜಿಲ್ಲಾಡಳಿತದಿಂದ ಪರಿಹಾರ ಕೊಡೊಕೆ ಅವಕಾಶ ಇಲ್ಲ. ಹಾಗಾಗಿ ಸಿಎಂ ಪರಿಹಾರ ನಿಧಿಯಿಂದ ಪರಿಹಾರ ಕೊಡಿಸುವ ಭರವಸೆಯನ್ನು ಆರ್ ಅಶೋಕ ನೀಡಿದರು.

Edited By :
PublicNext

PublicNext

19/09/2026 10:26 pm

Cinque Terre

4.99 K

Cinque Terre

0

ಸಂಬಂಧಿತ ಸುದ್ದಿ