ಬೆಳಗಾವಿ : ಬೆಳಗಾವಿಯ ಚವ್ಹಾಟ್ ಗಲ್ಲಿಯಲ್ಲಿ ನಡೆದ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದು, ಮಾನವೀಯತೆಯ ಆಧಾರದ ಮೇಲೆ ಸರ್ಕಾರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯಿಸಿದರು.
ಒಂದೇ ಕುಟುಂಬದ 6 ಮಂದಿ ಮೃತಪಟ್ಟಿರುವುದು ಹೃದಯವಿದ್ರಾವಕ ಘಟನೆ. ಬಡ ಕುಟುಂಬಕ್ಕೆ ಈ ಘಟನೆ ಘೋರ ಅನ್ಯಾಯವಾಗಿದೆ. ವಿಪಕ್ಷ ನಾಯಕರು ಈಗಾಗಲೇ ಜಿಲ್ಲಾಧಿಕಾರಿಯವರೊಂದಿಗೆ ಮಾತನಾಡಿದ್ದಾರೆ. ಮೃತರ ಕುಟುಂಬಕ್ಕೆ ಸರ್ಕಾರ ಮಾನವೀಯತೆಯ ಆಧಾರದ ಮೇಲೆ ಪರಿಹಾರ ನೀಡಬೇಕು. ಮುಖ್ಯಮಂತ್ರಿ ಹಾಗೂ ಸರ್ಕಾರಕ್ಕೆ ನಾನೂ ಒತ್ತಾಯಿಸುತ್ತೇನೆ ಎಂದು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಬಿಜೆಪಿ ಪಕ್ಷದಿಂದ ಮೃತರ ಕುಟುಂಬಕ್ಕೆ ₹1 ಲಕ್ಷ ಪರಿಹಾರ ನೀಡಿದ್ದೇವೆ ಎಂದು ಅವರು ತಿಳಿಸಿದರು.
PublicNext
19/09/2026 10:30 pm
LOADING...