ಮಂಗಳೂರು: ಅಪ್ರಾಪ್ತಯನ್ನು ಅತ್ಯಾಚಾರದಗೈದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-2) ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿದೆ.
ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತೀಫ್ ಶಿಕ್ಷೆಗೆ ಗುರಿಯಾದ ಅಪರಾಧಿ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅಬ್ದುಲ್ ಲತೀಫ್ ಸೇರಿದಂತೆ ಮೂವರ ವಿರುದ್ಧ ಪೊಕ್ಸೊ ಕಾಯ್ದೆ-2012ರ ವಿವಿಧ ಕಲಂಗಳಡಿ ಹಾಗೂ ಬಿಎನ್‌ಎಸ್-2023ರ ಸಂಬಂಧಿತ ಕಲಂಗಳಡಿ ಅ.ಕ್ರ. 141/2025ರಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಬಂಟ್ವಾಳ ನಗರ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಅವರು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ಮಂಗಳೂರಿನ FTSC-2 ನ್ಯಾಯಾಲಯದಲ್ಲಿ ನಡೆದಿದ್ದು, ವಿಚಾರಣೆ ವೇಳೆ ಹಾಜರುಪಡಿಸಲಾದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿದ ನ್ಯಾಯಾಧೀಶ ಮಾನು ಕೆ.ಎಸ್. ಅವರು ಅಬ್ದುಲ್ ಲತೀಫ್ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ತೀರ್ಮಾನಿಸಿ 20ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿ ಸೆ.19ರಂದು ತೀರ್ಪು ನೀಡಿದ್ದಾರೆ.
ದಂಡದ ಮೊತ್ತವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡುವಂತೆ ನ್ಯಾಯಾಲಯ ನಿರ್ದೇಶಿಸಿದೆ. ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ್ದರು.
PublicNext
19/09/2026 10:31 pm
LOADING...