ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎನ್.ಆರ್.ಪುರ: ಕಸ್ತೂರಿ ರಂಗನ್ ವರದಿ ವಿರುದ್ಧ ಮಲೆನಾಡಿಗರ ರಣಕಹಳೆ

ಎನ್.ಆರ್. ಪುರ: ​ಕಸ್ತೂರಿ ರಂಗನ್ ವರದಿ ಜಾರಿಯನ್ನು ಸಂಪೂರ್ಣವಾಗಿ ಕೈಬಿಡುವಂತೆ ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಳೆಹೊನ್ನೂರಿಗೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ಸಂಗಮೇಶ್ವರಪೇಟೆಯಿಂದ ಬಾಳೆಹೊನ್ನೂರಿನವರೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು 12 ಕಿಲೋಮೀಟರ್ ದೂರ ಪಾದಯಾತ್ರೆ ನಡೆಸಿದರು.

​ಬಾಳೆಹೊನ್ನೂರು ಬಸ್ ನಿಲ್ದಾಣದ ವೃತ್ತದ ಬಳಿ ಬೃಹತ್ ಸಂಖ್ಯೆಯಲ್ಲಿ ಜಮಾವಣೆಗೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ವರದಿಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕೆಂದು ಒತ್ತಾಯಿಸಿದರು. ಈ ಬಗ್ಗೆ ಚಿಕ್ಕಮಗಳೂರು ಪ್ರತಿನಿಧಿ ಡ್ಯಾನಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

Edited By : Somashekar
PublicNext

PublicNext

19/09/2026 11:32 pm

Cinque Terre

4.07 K

Cinque Terre

0

ಸಂಬಂಧಿತ ಸುದ್ದಿ