ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ತುಳುವಿಗೆ ಗೌರವ ಸಿಕ್ತು, ಕೊಡವ-ಅರೆಭಾಷೆಗ್ಯಾಕಿಲ್ಲ,ಸಂಸದ ಯದುವೀರ್ ಆಗ್ರಹ

ಮೈಸೂರು: ಮಂಗಳೂರಿನಲ್ಲಿ ತುಳು ಭಾಷೆಗೆ ಸೂಕ್ತ ಪ್ರಾತಿನಿಧ್ಯ ನೀಡಿ ಗೌರವಿಸಿರುವುದು ಸಂತಸ ತಂದಿದ್ದು, ಅದೇ ಮಾದರಿಯಲ್ಲಿ ಕೊಡಗು ಜಿಲ್ಲೆಯಲ್ಲಿಯೂ ಸ್ಥಳೀಯ ಕೊಡವ ಹಾಗೂ ಅರೆಭಾಷೆಗಳ ಅಭಿವೃದ್ಧಿಗೆ ಆದ್ಯತೆ ನೀಡಿ ತಕ್ಷಣವೇ ಸೂಕ್ತ ಮಾನ್ಯತೆ ಹಾಗೂ ಪ್ರಾತಿನಿಧ್ಯ ನೀಡಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದ್ದಾರೆ.

ಕೊಡಗಿನ ಸಾಂಸ್ಕೃತಿಕ ಹಾಗೂ ಭಾಷಿಕ ಅನನ್ಯತೆಯನ್ನು ಕಾಯ್ದುಕೊಳ್ಳಲು ಈ ಭಾಗದಲ್ಲಿ ಅಸ್ತಿತ್ವದಲ್ಲಿರುವ ಪ್ರಮುಖ ಸ್ಥಳೀಯ ಭಾಷೆಗಳ ಬೆಳವಣಿಗೆಗೆ ಸರ್ಕಾರ ಮತ್ತು ಸಂಬಂಧಪಟ್ಟ ಸಂಸ್ಥೆಗಳು ವಿಶೇಷ ಶ್ರಮ ವಹಿಸಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

Edited By : Somashekar
PublicNext

PublicNext

19/09/2026 11:45 pm

Cinque Terre

4.41 K

Cinque Terre

0

ಸಂಬಂಧಿತ ಸುದ್ದಿ