ಮೈಸೂರು: ರಾಜ್ಯದಲ್ಲಿ ಪ್ರತಿನಿತ್ಯ ವಿದ್ಯುತ್ ಸಮಸ್ಯೆ ಹೆಚ್ಚಾಗುತ್ತಿದ್ದು, ರೈತರು ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ಕೊರತೆಯಿಂದ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಷ್ಟಾದರೂ ರಾಜ್ಯ ಸರ್ಕಾರ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಲ್ಲಿ ವಿಫಲವಾಗಿದೆ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದರು.
ಕರ್ನಾಟಕದಲ್ಲಿ ಮಾತ್ರ ಈ ರೀತಿಯ ವಿದ್ಯುತ್ ಸಮಸ್ಯೆ ಉಂಟಾಗಿದೆ ಎಂದು ಹೇಳಿದ ಅವರು, ಕರ್ನಾಟಕಕ್ಕೆ ಹೋಲಿಸಿದರೆ ಇತರೆ ಸಣ್ಣ ರಾಜ್ಯಗಳು ಹಾಗೂ ರಾಜ್ಯಕ್ಕಿಂತ ಹೆಚ್ಚಿನ ಬರಗಾಲ ಎದುರಿಸುತ್ತಿರುವ ರಾಜ್ಯಗಳಲ್ಲಿಯೂ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಹೇಳಿದರು.
ಆದರೆ ಕರ್ನಾಟಕದಲ್ಲಿ ಮಾತ್ರ ವಿದ್ಯುತ್ ಸಮಸ್ಯೆ ಉಂಟಾಗಿದ್ದು, ಇದನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಸರ್ಕಾರದ ವಿರುದ್ಧ ಸಂಸದ ಯದುವೀರ್ ಕಿಡಿಕಾರಿದರು.
PublicNext
19/09/2026 11:52 pm
LOADING...