ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ‘ನಂಬಿಕೆ ನಕ್ಷೆ 2.0’ ವ್ಯವಸ್ಥೆ ಲೋಕಾರ್ಪಣೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ 50x80 ಅಡಿ ವರೆಗಿನ ವಸತಿ ನಿವೇಶನಗಳಲ್ಲಿ ಗರಿಷ್ಠ 4 ವಸತಿ ಘಟಕಗಳವರೆಗೆ ಕಟ್ಟಡ ನಿರ್ಮಾಣಕ್ಕೆ ಸಂಪೂರ್ಣ ಸ್ವಯಂಚಾಲಿತ ಕಟ್ಟಡ ನಕ್ಷೆ ಮಂಜೂರಾತಿ ವ್ಯವಸ್ಥೆಯನ್ನು ಒಳಗೊಂಡ ‘ನಂಬಿಕೆ ನಕ್ಷೆ 2.0’ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದ್ದು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಇಂದು ಲೋಕಾರ್ಪಣೆ ಮಾಡಿದರು.

ಈ ವೇಳೆ‌ ಮಾತನಾಡಿದ‌ ಅವರು ಜನರಿಗೆ ಸರಳ, ವೇಗದ ಹಾಗೂ ಪಾರದರ್ಶಕ ಆಡಳಿತ ಒದಗಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಕಟ್ಟಡ ನಕ್ಷೆ ಮಂಜೂರಾತಿ ಪ್ರಕ್ರಿಯೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಈ ಹಿಂದೆ ಕಟ್ಟಡ ನಕ್ಷೆ ಮಂಜೂರಾತಿಗಾಗಿ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವ ನಂಬಿಕೆ ನಕ್ಷೆ ವ್ಯವಸ್ಥೆಯನ್ನು ಜಾರಿಗೆ ತರಲಾಗಿತ್ತು. ಈ ವ್ಯವಸ್ಥೆಯ ಅನುಷ್ಠಾನದ ನಂತರವೂ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಿ, ಸಾರ್ವಜನಿಕರಿಗೆ ವೇಗವಾಗಿ ಸೇವೆ ಒದಗಿಸುವ ಅಗತ್ಯವನ್ನು ಮನಗಂಡು, ಮುಖ್ಯಮಂತ್ರಿಗಳು ನೀಡಿದ ನಿರ್ದೇಶನದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ 'ನಂಬಿಕೆ ನಕ್ಷೆ 2.0’ ವ್ಯವಸ್ಥೆಯನ್ನು ರೂಪಿಸಲಾಗಿದೆ.

ಈ ಸಂದರ್ಭದಲ್ಲಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್. ರಮೇಶ್, ಮುಖ್ಯ ನಗರ ಯೋಜಕರಾದ ಪಿ. ಸುನೀಲ್ ಕುಮಾರ್, ಅಪರ ಮುಖ್ಯ ನಗರ ಯೋಜಕರಾದ ಬಿ.ಎನ್. ಗಿರೀಶ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Somashekar
PublicNext

PublicNext

20/09/2026 12:01 am

Cinque Terre

4.61 K

Cinque Terre

0

ಸಂಬಂಧಿತ ಸುದ್ದಿ