ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸಪೇಟೆ: ಜನರ ಬಳಿಗೇ ಬಂದ ಸರ್ಕಾರ,ಹೊಸಪೇಟೆ ಪ್ರಜಾಸೇವಾ ಆಂದೋಲನದಲ್ಲಿ 322 ಅರ್ಜಿ ಸ್ವೀಕಾರ

ಹೊಸಪೇಟೆ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ ಕಚೇರಿಯಿಂದ ಕಚೇರಿಗೆ ಅಲೆಯುವುದನ್ನು ತಪ್ಪಿಸಿ, ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಜಾಸೇವೆ ಆಂದೋಲನ ಆಯೋಜಿಸಲಾಗಿದೆ. ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಒಂದಾಗಿದೆ ಅಧಿಕಾರಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು ಎಂದು ವಿಜಯನಗರ ಶಾಸಕ ಹೆಚ್ ಆರ್ ಗವಿಯಪ್ಪ ಹೇಳಿದರು. ಹೊಸಪೇಟೆ ತಾಲ್ಲೂಕಿನ ಬುಕ್ಕಸಾಗರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ 76 ವೆಂಕಟಾಪುರ ಕ್ಯಾಂಪ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಗ್ರಾಮ ಮಟ್ಟದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರವೇ ಜನರ ಬಳಿ ಹೋಗಿ ಅವರ ಸಮಸ್ಯೆಗಳ ಆಲಿಸಬೇಕು ಎನ್ನುವ ಐತಿಹಾಸಿಕ ತೀರ್ಮಾನದೊಂದಿಗೆ ಪ್ರಜಾಸೇವೆ ಆಂದೋಲನ ಆರಂಭಿಸಲಾಗಿದೆ.

ಈ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ 06 ಅರ್ಜಿ, ಸರ್ವೇ ಇಲಾಖೆ 2, ಗ್ರಾಪಂ, ರಾಜ್ 302, ಸಂಬಂಧಿಸಿದಂತೆ ಹಾಗೂ KKSRTC ಸಂಸ್ಥೆ 01 ಒಟ್ಟು 322 ಅರ್ಜಿಗಳು ಸಲ್ಲಿಕೆಯಾಗಿವೆ ಅಂತ ಶಾಸಕ ಗವಿಯಪ್ಪ ಹೇಳಿದ್ರು. ಸಾರ್ವಜನಿಕರು ಜಮೀನು, ಮೂಲಸೌಕರ್ಯ, ಆಹಾರ ಇಲಾಖೆ ಹಾಗೂ ಇಲಾಖಾವಾರು ಸಮಸ್ಯೆಗಳ ಕುರಿತು ಸಲ್ಲಿಸಿರುವ ಪ್ರತಿಯೊಂದು ಅರ್ಜಿಯನ್ನು ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರಿಗೆ ರವಾನಿಸಿ, ನಿರ್ದಿಷ್ಟ ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪ್ರಜಾಸೇವೆ ಆಂದೋಲನವು ಪ್ರಜೆಗಳಿಂದ, ಪ್ರಜೆಗಳಿಗಾಗಿ ಮತ್ತು ಪ್ರಜೆಗಳಿಗೋಸ್ಕರ ರೂಪಿಸಲಾದ ಕಾರ್ಯಕ್ರಮ. ಪ್ರಜಾ ಸರ್ಕಾರಕ್ಕೆ ಅರ್ಥ ಬರುವ ರೀತಿಯಲ್ಲಿ ಸಾರ್ವಜನಿಕರ ಪ್ರತಿಯೊಂದು ಆಹವಾಲು ಸ್ವೀಕರಿಸಿ, ಕಾನೂನುಬದ್ಧವಾಗಿ ವಿಲೇವಾರಿ ಮಾಡಲು ಜಿಲ್ಲಾ ಹಾಗೂ ತಾಲೂಕು ಆಡಳಿತ ಕಂಕಣ ಬದ್ಧವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಶಾಸಕ ಗವಿಯಪ್ಪ ಸಹಾಯಕ ಆಯುಕ್ತರು ಹಾಗೂ ತಹಶೀಲ್ದಾರ್ ಅವರು ವಿವಿಧ ಇಲಾಖೆ ಅಧಿಕಾರಿಗಳು ಸಂಬಂಧಿಸಿದ ದೂರು, ಅಹವಾಲು ಸ್ವೀಕರಿಸಿದರು.

Edited By :
PublicNext

PublicNext

20/09/2026 07:51 am

Cinque Terre

4.34 K

Cinque Terre

0

ಸಂಬಂಧಿತ ಸುದ್ದಿ