ರಾಯಚೂರು : ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ರಾಯಚೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1,810 ಗ್ರಾಂ ಒಣ ಗಾಂಜಾವನ್ನು ಜಪ್ತಿ ಮಾಡಿಕೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಅಕ್ರಮ ಗಾಂಜಾ ಮಾರಾಟ ಪತ್ತೆಗಾಗಿ ಎಸ್ಪಿ ಅರುಣಾಂಶ್ಯುಗಿರಿ ಅವರು ವಿಶೇಷ ತಂಡವನ್ನು ರಚಿಸಿದ್ದರು. ಅಕ್ರಮವಾಗಿ ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುವವರನ್ನು ಪತ್ತೆ ಮಾಡುವ ಕಾರ್ಯಾಚರಣೆಯಲ್ಲಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ರಾಯಚೂರು ನಗರದ ಅಲ್ಲಮಪ್ರಭು ಕಾಲೋನಿಯ ಹೊರವಲಯದಲ್ಲಿ ಅಕ್ರಮವಾಗಿ ಒಣ ಗಾಂಜಾ ಮಾರಾಟ ಮಾಡುತ್ತಿದ್ದ ಎ-1 ಮೊಹಮ್ಮದ್ ಕೈಫ್ (20) ಹಾಗೂ ಎ-2 ಹುಸೇನ್ ಬಾಷಾ (23) ಎಂಬುವವರನ್ನು ವಶಕ್ಕೆ ಪಡೆದು, ₹36,000 ಮೌಲ್ಯದ 1,810 ಗ್ರಾಂ ಒಣ ಗಾಂಜಾವನ್ನು ಜಪ್ತಿ ಮಾಡಲಾಗಿದೆ. ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
PublicNext
20/09/2026 12:54 pm
LOADING...