ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ಅಧಿಕಾರ ಸ್ವೀಕಾರ

ಚಾಮರಾಜನಗರ : ನಗರದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಜೆ. ಯೋಗೇಶ್ ಅವರು ಜಿಲ್ಲಾ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆದ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಎಚ್.ಎಂ. ಗಣೇಶ್ ಪ್ರಸಾದ್ ಉದ್ಘಾಟಿಸಿದರು. ಬಳಿಕ ಹಿಂದಿನ ಅಧ್ಯಕ್ಷರಾಗಿದ್ದ ಪಿ. ಮರೀಸ್ವಾಮಿ ಅವರಿಂದ ನೂತನ ಅಧ್ಯಕ್ಷ ಜೆ. ಯೋಗೇಶ್ ಅವರು ಕಾಂಗ್ರೆಸ್ ಪಕ್ಷದ ಧ್ವಜವನ್ನು ಸ್ವೀಕರಿಸಿ ಜಿಲ್ಲಾಧ್ಯಕ್ಷ ಸ್ಥಾನವನ್ನು ವಹಿಸಿಕೊಂಡರು.

Edited By : PublicNext Desk
Kshetra Samachara

Kshetra Samachara

20/09/2026 01:05 pm

Cinque Terre

180

Cinque Terre

0

ಸಂಬಂಧಿತ ಸುದ್ದಿ