ಬೆಂಗಳೂರು : ಅಪರ ಜಿಲ್ಲಾ ಚುನಾವಣಾಧಿಕಾರಿ (ಬೆಂಗಳೂರು ಕೇಂದ್ರ) ಹಾಗೂ ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ಶ್ರೀ ಜಗದೀಶ್.ಜಿ ಅವರು SIR-2026 (ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ) ಕುರಿತು ಮಹಾತ್ಮ ಗಾಂಧಿ ರಸ್ತೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಾಕಥಾನ್‌ನಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಆಯುಕ್ತರು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR-2026) ಕುರಿತು ಮಾಹಿತಿ ನೀಡಿದರು ಹಾಗೂ ಅರ್ಹ ನಾಗರಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳುವಂತೆ ಜಾಗೃತಿ ಮೂಡಿಸಿದರು.
ಈ ವೇಳೆ ಅಭಿವೃದ್ಧಿ ಅಪರ ಆಯುಕ್ತರಾದ ಶ್ರೀ ವೆಂಕಟಾಚಲಪತಿ ಆರ್., ಕಂದಾಯ ಅಪರ ಆಯುಕ್ತರಾದ ಶ್ರೀಮತಿ ಲಕ್ಷ್ಮಮ್ಮ, ಜಂಟಿ ಆಯುಕ್ತರಾದ ಶ್ರೀ ರಂಗನಾಥ್.ಕೆ, ಶ್ರೀ ಹೇಮಂತ್ ಶರಣ್, ಉಪ ಆಯುಕ್ತರಾದ ಶ್ರೀ ಅಬ್ದುಲ್ ರಬ್, ಚುನಾವಣಾ ವಿಭಾಗದ ತಹಶೀಲ್ದಾರ್, ಆರೋಗ್ಯಾಧಿಕಾರಿಗಳು, ಸಹಾಯಕ ಕಂದಾಯ ಅಧಿಕಾರಿಗಳು ಸೇರಿದಂತೆ ಕೇಂದ್ರ ನಗರ ಪಾಲಿಕೆಯ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
PublicNext
20/09/2026 01:13 pm
LOADING...