ಮೈಸೂರು : ಟಿ. ನರಸೀಪುರ ಪಟ್ಟಣದಲ್ಲಿ ಸೆಪ್ಟೆಂಬರ್ 10ರಂದು ನಡೆದ ಶೋಭಾಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಟ್ಟಣದ ಲಿಂಕ್ ರಸ್ತೆಯಲ್ಲಿರುವ ಮಸೀದಿ ಮುಂದೆ ಪ್ರತಾಪ್ ಸಿಂಹ ಅವರು ಕೋಮು ಗಲಭೆ ಉಂಟಾಗುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಅಲ್ಲದೆ, ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಸಾರ್ವಜನಿಕ ಸೇವಕರು ಮತ್ತು ಪೊಲೀಸರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪ, ಧಾರ್ಮಿಕ ನಂಬಿಕೆಗಳಿಗೆ ಅವಮಾನ ಹಾಗೂ ಪ್ರಚೋದನಕಾರಿ ಭಾಷಣಗಳ ಮೂಲಕ ವಿವಿಧ ಗುಂಪುಗಳು ಮತ್ತು ಜಾತಿಗಳ ನಡುವೆ ದ್ವೇಷ ಉತ್ತೇಜಿಸಿ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ ಆರೋಪದಡಿ ಎಫ್‌ಐಆರ್ ದಾಖಲಿಸಲಾಗಿದೆ.
ಈ ಸಂಬಂಧ ಬಿಎನ್‌ಎಸ್‌ನ (ಭಾರತೀಯ ನ್ಯಾಯ ಸಂಹಿತೆ) ಸೆಕ್ಷನ್ 132, 191, 194, 196(1)(a)(b), 299, 353(1)(b)(c) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಟಿ. ನರಸೀಪುರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
PublicNext
20/09/2026 01:26 pm
LOADING...