ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಮಧ್ಯರಾತ್ರಿ ಘೋರ ದುರಂತ; ಶಾರ್ಟ್ ಸರ್ಕ್ಯೂಟ್‌ಗೆ ಓರ್ವ ಬಲಿ, ಇಬ್ಬರ ಸ್ಥಿತಿ ಗಂಭೀರ

ಹುಬ್ಬಳ್ಳಿ : ಹುಬ್ಬಳ್ಳಿಯ ನವ ಅಯೋಧ್ಯ ನಗರದಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನವ ಅಯೋಧ್ಯ ನಗರದಲ್ಲಿ ತಡರಾತ್ರಿ ಸುಮಾರು 2 ಗಂಟೆಯ ವೇಳೆಗೆ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಮನೆಯಲ್ಲಿದ್ದ ಮೂವರ ಪೈಕಿ ಮೋಹನ್ ಎಂಬ ವ್ಯಕ್ತಿ ಬೆಂಕಿ ಅವಘಡದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಕಿಮ್ಸ್ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

20/09/2026 02:14 pm

Cinque Terre

16.43 K

Cinque Terre

0

ಸಂಬಂಧಿತ ಸುದ್ದಿ