ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ : ಗಣೇಶನ ವಿಸರ್ಜನೆಗೆ ಮುಸ್ಲಿಮರು ಸಾಥ್!

ಚಿಕ್ಕಬಳ್ಳಾಪುರ : ಚಿಂತಾಮಣಿ ತಾಲೂಕಿನ ಹಿಂದೂ-ಮುಸ್ಲಿಂ ಭಾವೈಕ್ಯತೆಯ ತಾಣ ಮುರುಗಮಲ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ಹಿಂದೂ-ಮುಸ್ಲಿಮರು ಸೌಹಾರ್ದತೆಯಿಂದ ಭಾಗಿಯಾಗಿ ಎಲ್ಲರ ಗಮನ ಸೆಳೆದಿದ್ದಾರೆ.

ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ನೂರಾರು ಭಕ್ತರಿಗೆ ಸ್ಥಳೀಯ ಮುಸ್ಲಿಂ ಬಾಂಧವರು ಜ್ಯೂಸ್, ಕುಡಿಯುವ ನೀರು ಹಾಗೂ ಸಿಹಿ-ಖಾರ, ಬಿಸ್ಕತ್‌ಗಳನ್ನು ವಿತರಿಸಿ ಸೌಹಾರ್ದತೆ ಮೆರೆದಿದ್ದಾರೆ.

ಅನಾದಿ ಕಾಲದಿಂದಲೂ ಹಿಂದೂ-ಮುಸ್ಲಿಮರು ಅಣ್ಣ-ತಮ್ಮಂದಿರಂತೆ ಭಾಗಿಯಾಗಿ ಹಬ್ಬ-ಹರಿದಿನಗಳನ್ನು ಸಂಭ್ರಮಿಸುವುದು ನಮ್ಮ ಪರಂಪರೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

Edited By : Somashekar
PublicNext

PublicNext

20/09/2026 03:09 pm

Cinque Terre

1.43 K

Cinque Terre

0

ಸಂಬಂಧಿತ ಸುದ್ದಿ