ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್ : 3,500 ಶಿಕ್ಷಕರಿಗೆ ವಿಶೇಷ ಗೌರವ!

ಬೀದರ್ : ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಈ ವೇಳೆ ಔರಾದ್ ಮತ್ತು ಕಮಲನಗರ ತಾಲೂಕುಗಳ ವಿವಿಧ ಶಿಕ್ಷಣ ಸಂಸ್ಥೆಗಳ ಸುಮಾರು 3,500 ಶಿಕ್ಷಕರಿಗೆ ಶಾಸಕ ಪ್ರಭು ಚೌಹಾಣ್ ವಿಶೇಷ ಗೌರವ ಸಲ್ಲಿಸಿದರು.

ಇದಕ್ಕೂ ಮುನ್ನ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಖ್ಯಾತ ಶಿಕ್ಷಣ ತಜ್ಞ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು. ಬಸವೇಶ್ವರ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಬಸ್ ನಿಲ್ದಾಣ, ಎಪಿಎಂಸಿ ವೃತ್ತ, ಡಾ. ಚನ್ನಬಸವ ಪಟ್ಟದೇವರು ವೃತ್ತದ ಮಾರ್ಗವಾಗಿ ಸಾಗಿತು. ಮೆರವಣಿಗೆಯುದ್ದಕ್ಕೂ ಶಿಕ್ಷಕರು ಕನ್ನಡ ಹಾಡುಗಳಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.

ಈ ವೇಳೆ ಮಾತನಾಡಿದ ಪ್ರಭು ಚೌಹಾಣ್, ಶಿಕ್ಷಕರು ಸಮಾಜದ ಭವಿಷ್ಯವನ್ನು ರೂಪಿಸುವ ಶಿಲ್ಪಿಗಳಾಗಿದ್ದು, ಶಿಕ್ಷಕರ ಬಹುದಿನಗಳ ಬೇಡಿಕೆಯಾದ ಗುರುಭವನ ನಿರ್ಮಾಣಕ್ಕೆ ಈಗಾಗಲೇ ₹50 ಲಕ್ಷ ಅನುದಾನ ಮಂಜೂರು ಮಾಡಿರುವುದಾಗಿ ತಿಳಿಸಿದರು.

Edited By : Vinayak Patil
PublicNext

PublicNext

20/09/2026 03:14 pm

Cinque Terre

1.01 K

Cinque Terre

0

ಸಂಬಂಧಿತ ಸುದ್ದಿ