ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ : ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರ ಆಕ್ರೋಶ!

ಚಿಕ್ಕಬಳ್ಳಾಪುರ : ಸರ್ಕಾರ ಸಮಸ್ತ ಆ್ಯಪ್ ಮತ್ತು ನಿಕ್ಷಯ್ ಆ್ಯಪ್‌ನಲ್ಲಿ ಕೆಲಸ ಮಾಡಲು ಒತ್ತಡ ಹೇರುತ್ತಿರುವುದನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಬೃಹತ್ ಪ್ರತಿಭಟನೆ ನಡೆಸಿದರು.

ಈ ವೇಳೆ ಆಶಾ ಕಾರ್ಯಕರ್ತೆಯರು ಸಮಸ್ತ ಆ್ಯಪ್ ಮೂಲಕ ದಾಖಲಾತಿ ಮಾಡಿಸುವುದು ಹಾಗೂ ನಿಕ್ಷಯ್ ಆ್ಯಪ್‌ನಲ್ಲಿ ಕೆಲಸ ಮಾಡುವ ಜವಾಬ್ದಾರಿ ಆಶಾ ಕಾರ್ಯಕರ್ತೆಯರದ್ದಲ್ಲ. ಆದ್ದರಿಂದ ಈ ಕೆಲಸಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ಆರ್‌ಸಿಎಚ್ ಪೋರ್ಟಲ್ ಮೂಲಕ ಕೇಂದ್ರದಿಂದ ನೀಡಲಾಗುವ ಪ್ರೋತ್ಸಾಹಧನದಲ್ಲಿ ಆಶಾ ಕಾರ್ಯಕರ್ತೆಯರಿಗೆ ಅವರು ನಿರ್ವಹಿಸುವ ಕೆಲಸಕ್ಕೆ ಅನುಗುಣವಾಗಿ ವೇತನ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆಶಾ ಕಾರ್ಯಕರ್ತೆಯರಿಗೆ ಬಾಕಿ ಇರುವ ಪ್ರೋತ್ಸಾಹಧನವನ್ನು ನೀಡಬೇಕು ಹಾಗೂ ಹಲವಾರು ವರ್ಷಗಳಿಂದ ಬಾಕಿ ಇರುವ ವಿವಿಧ ಕಾಂಪೊನೆಂಟ್‌ಗಳ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

Edited By :
PublicNext

PublicNext

20/09/2026 03:19 pm

Cinque Terre

978

Cinque Terre

0