ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

9 ವರ್ಷದ ಬಾಲಕಿಗೆ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ಕಾಮುಕನಿಗೆ ಬಿತ್ತು ಧರ್ಮದೇಟು

ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ಹುಬ್ಬಳ್ಳಿಯಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚುತ್ತಿವೆ. ಅದೇ ರೀತಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 9 ವರ್ಷದ ಬಾಲಕಿಗೆ ಅಶ್ಲೀಲ ಚಿತ್ರಗಳನ್ನು ತೋರಿಸಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ 35 ವರ್ಷದ ಮಜೀದ್ ನದಾಫ್ ಎಂಬ ಆರೋಪಿಗೆ ಸಂಬಂಧಿಕರು ಚಪ್ಪಲಿ ಏಟು ಕೊಟ್ಟು ಧರ್ಮದೇಟು ನೀಡಿದ್ದು, ಆತನ ವಿರುದ್ಧ ದೂರು ದಾಖಲಾಗಿದೆ.

ಹೌದು! ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ, ನೊಂದ ಬಾಲಕಿಯ ಕುಟುಂಬಸ್ಥರು ಹಾಗೂ ಶ್ರೀರಾಮ ಸೇನಾ ಧರ್ಮ ಚೈತನ್ಯ ಸಮಿತಿ ಕಾರ್ಯಕರ್ತರು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಅರೆಸ್ಟ್ ಮಾಡಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Edited By : Somashekar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

20/09/2026 03:24 pm

Cinque Terre

7.02 K

Cinque Terre

2

ಸಂಬಂಧಿತ ಸುದ್ದಿ