ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಜಿಲ್ಲಾಧಿಕಾರಿ ಆದೇಶಕ್ಕೆ ಕ್ಯಾರೇ ಎನ್ನದ ಪಿಕಲೋ ಬಾರ್: ನಮಗೆ ನಾವೇ ಬಾಸ್

ಧಾರವಾಡ : ಮದ್ಯ ಮಾರಾಟ ನಿಷೇಧದ ಆದೇಶ ಜಾರಿಯಲ್ಲಿದ್ದರೂ, ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಪಿಕಲೋ ಬಾರ್‌ನಲ್ಲಿ ಮಧ್ಯರಾತ್ರಿ ಭರ್ಜರಿ ಮದ್ಯ ಮಾರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಗಣೇಶೋತ್ಸವದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ 7 ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು. ಅದರಂತೆ, ಸೆಪ್ಟೆಂಬರ್ 20ರಂದು ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿತ್ತು.

ಆದರೆ, ಜಿಲ್ಲಾಧಿಕಾರಿಗಳ ಆದೇಶವನ್ನೇ ಲೆಕ್ಕಿಸದೆ ವಿದ್ಯಾನಗರದ ಪಿಕಲೋ ಬಾರ್‌ನಲ್ಲಿ ಮಧ್ಯರಾತ್ರಿಯಲ್ಲೂ ಮದ್ಯ ಮಾರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಹಾಗಾದರೆ, ಜಿಲ್ಲಾಧಿಕಾರಿಗಳ ಆದೇಶಕ್ಕೆ ಕಿಮ್ಮತ್ತು ನೀಡದ ಆರೋಪ ಎದುರಿಸುತ್ತಿರುವ ಈ ಬಾರ್ ವಿರುದ್ಧ ಅಬಕಾರಿ ಇಲಾಖೆ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ? ನಿಷೇಧದ ನಡುವೆಯೂ ಮದ್ಯ ಮಾರಾಟವಾಗಿದ್ದರೆ, ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಜರುಗುತ್ತಾ? ಈ ಕುರಿತು ಅಬಕಾರಿ ಇಲಾಖೆ ಅಧಿಕಾರಿಗಳ ಮುಂದಿನ ಕ್ರಮ ಏನು ಎಂಬುದನ್ನು ಕಾದು ನೋಡಬೇಕಿದೆ.

ವಿನಯ ರೆಡ್ಡಿ, ಪಬ್ಲಿಕ್ ನೆಕ್ಸ್ಟ್

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

20/09/2026 04:07 pm

Cinque Terre

6.4 K

Cinque Terre

1

ಸಂಬಂಧಿತ ಸುದ್ದಿ