ರೈಲು ನಿಲ್ದಾಣವೊಂದರಲ್ಲಿ ಇಬ್ಬರು ಯುವಕರು ಪರಸ್ಪರ ಹೊಡೆದಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಡಿಯೋದಲ್ಲಿ ಮೊದಲು ಇಬ್ಬರು ಯುವಕರು ಪರಸ್ಪರ ಹೊಡೆದಾಡಿಕೊಳ್ಳುತ್ತಿರುವುದು ಕಂಡುಬರುತ್ತದೆ. ಬಳಿಕ ಜಗಳ ಬಿಡಿಸುವ ನೆಪದಲ್ಲಿ ಅಲ್ಲಿಗೆ ಬಂದ ಮತ್ತಿಬ್ಬರು ಯುವಕರು, ಜಗಳದಲ್ಲಿ ತೊಡಗಿದ್ದ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ.
ಸಾರ್ವಜನಿಕ ಸ್ಥಳದಲ್ಲೇ ನಡೆದ ಈ ಮಾರಾಮಾರಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಣ್ಣಪುಟ್ಟ ವಿಚಾರಗಳಿಗೂ ಹಿಂಸೆಗೆ ಮುಂದಾಗುತ್ತಿರುವ ಪ್ರವೃತ್ತಿ ಹೆಚ್ಚುತ್ತಿರುವ ಬಗ್ಗೆ ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ.
PublicNext
20/09/2026 06:01 pm
LOADING...