ಹಾಸನ: ಗ್ರಾಮ ಪಂಚಾಯಿತಿ ಚುನಾವಣೆಯ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಚಿವ ಹೆಚ್. ಡಿ. ರೇವಣ್ಣ ಅವರು ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ವಾಗ್ದಾಳಿ ನಡೆಸಿದ್ದ ಬೆನ್ನಲ್ಲೇ, ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಡಿಸಿ ಬೆಂಬಲಕ್ಕೆ ನಿಂತಿದ್ದಾರೆ.
ಸಕಲೇಶಪುರ ಪಟ್ಟಣದ ಎಪಿಎಂಸಿ ಆವರಣದಲ್ಲಿ ನಡೆದ ಕಸ್ತೂರಿ ರಂಗನ್ ವರದಿ ಕುರಿತು ನೇರ ಸಂವಾದ ಸಭೆಯಲ್ಲಿ ಮಾತನಾಡಿದ ಡಿಕೆಶಿ, “ಹಾಸನ ಡಿಸಿಗೆ ಕಿರುಕುಳ ಇದೆ. ಯಾರಿಂದ ಕಿರುಕುಳ ಇದೆ ಎಂಬುದು ನಿಮಗೆ ಗೊತ್ತಿದೆ. ನಾನು ಅವರಿಗೆ ಫೋನ್ ಮಾಡಿ, ಯಾರಿಗೂ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ. ಬಡವರ ಪರವಾಗಿ ಕೆಲಸ ಮಾಡಮ್ಮ ಎಂದು ಹೇಳಿದ್ದೇನೆ” ಎಂದರು.
ಈ ಮೂಲಕ ಡಿಕೆಶಿ ಅವರು ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಇದೇ ವೇಳೆ ತಮ್ಮ ಸರ್ಕಾರದ ವಿರುದ್ಧದ ಟೀಕೆಗಳಿಗೆ ಪ್ರತಿಕ್ರಿಯಿಸಿದ ಅವರು, “ಕೆಲವರು ಟೀಕೆ ಮಾಡುತ್ತಾರೆ, ಮಾಡಲಿ ಸಂತೋಷ. ನಾನು ಕ್ಯಾಬಿನೆಟ್ ಮೀಟಿಂಗ್ ಮಾಡಿದರೂ ಟೀಕೆ ಮಾಡುತ್ತಾರೆ, ನಡೆದರೂ ಟೀಕೆ ಮಾಡುತ್ತಾರೆ” ಎಂದು ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ವಿರುದ್ಧವೂ ಪರೋಕ್ಷವಾಗಿ ಟಾಂಗ್ ನೀಡಿದರು.
“ಬಿಜೆಪಿ ಸ್ನೇಹಿತರು ಅವರ ಸಾಧನೆಗಳನ್ನು ಹೇಳಲಿ, ಬೇಡ ಎನ್ನಲ್ಲ. ದೇವರು ವರವನ್ನೂ ಕೊಡಲ್ಲ, ಶಾಪವನ್ನೂ ಕೊಡಲ್ಲ, ಅವಕಾಶ ಕೊಡುತ್ತಾನೆ. ನನಗೆ ಒಂದು ಅವಕಾಶ ಕೊಟ್ಟಿದ್ದಾನೆ” ಎಂದು ಡಿಕೆಶಿ ಹೇಳಿದರು.
PublicNext
20/09/2026 06:13 pm
LOADING...