ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಪ್ರಚೋದನಕಾರಿ ಭಾಷಣ ಆರೋಪ ; ಪ್ರತಾಪ್ ಸಿಂಹ ವಿರುದ್ಧ FIR.!

ಮೈಸೂರು: ಟಿ. ನರಸೀಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಟಿ. ನರಸೀಪುರ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಗಣೇಶ ಮೆರವಣಿಗೆ ನಡೆಸುವ ವಿಚಾರವಾಗಿ ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ಅವರ ಎಚ್ಚರಿಕೆ ವಿವಾದಕ್ಕೆ ಕಾರಣವಾಗಿತ್ತು. ಇದನ್ನು ಸವಾಲಾಗಿ ಸ್ವೀಕರಿಸಿ ನಡೆದ ಶೋಭಾಯಾತ್ರೆಯಲ್ಲಿ ಪ್ರತಾಪ್ ಸಿಂಹ ಅವರು ಇನ್ಸ್‌ಪೆಕ್ಟರ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರತಾಪ್ ಸಿಂಹ ಸೇರಿದಂತೆ ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 132, 191, 194, 196(1)(ಎ)(ಬಿ), 299, 353(1)(ಬಿ)(ಸಿ) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ, ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದು, ಧಾರ್ಮಿಕ ನಂಬಿಕೆಗಳಿಗೆ ಅವಮಾನ ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ ಆರೋಪಗಳನ್ನು ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Edited By :
PublicNext

PublicNext

20/09/2026 07:17 pm

Cinque Terre

5.17 K

Cinque Terre

1

ಸಂಬಂಧಿತ ಸುದ್ದಿ