ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದೋರ್: ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಿಮಿಕ್ರಿ : ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಕಿಡಿ.!

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಿಮಿಕ್ರಿ ಮಾಡಿರುವ ಘಟನೆ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

ಕಾರ್ಯಕ್ರಮದಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ ಪುಲ್ಕಿತ್ ಮಣಿ ಅವರು ಮೋದಿ ಅವರ ಮಾತಿನ ಶೈಲಿ, ಮ್ಯಾನರಿಸಂ ಹಾಗೂ ವಿದೇಶಿ ನಾಯಕರೊಂದಿಗಿನ ಸಂಭಾಷಣೆಯನ್ನು ಅನುಕರಿಸಿದ್ದಾರೆ. ಈ ವೇಳೆ ವೇದಿಕೆಯಲ್ಲಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನಗುತ್ತಿರುವ ದೃಶ್ಯಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಈ ವಿಡಿಯೋ ಆಧರಿಸಿ ಬಿಜೆಪಿ ನಾಯಕರು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಅವರ ದಿವಂಗತ ತಾಯಿಯನ್ನು ಅವಹೇಳನ ಮಾಡುವ ರೀತಿಯಲ್ಲಿ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಲಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕೂಡ ಈ ಘಟನೆಯನ್ನು ಖಂಡಿಸಿ, ವಿದ್ಯಾರ್ಥಿ ಕಾರ್ಯಕ್ರಮದ ವೇದಿಕೆಯನ್ನು ರಾಜಕೀಯ ಅಪಹಾಸ್ಯಕ್ಕೆ ಬಳಸಲಾಗಿದೆ ಎಂದು ಆರೋಪಿಸಿದ್ದಾರೆ.

ಕೇಂದ್ರ ಸಚಿವ ಕಿರಣ್ ರಿಜಿಜು ಕೂಡ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ಘಟನೆ ಕುರಿತು ತೀವ್ರ ಟೀಕೆ ಮಾಡಿದ್ದಾರೆ. ಬಿಜೆಪಿ ವಕ್ತಾರ ಸಿ.ಆರ್. ಕೇಶವನ್ ಕೂಡ ರಾಹುಲ್ ಗಾಂಧಿ ಅವರ ನಗುವನ್ನು ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ಕಾಂಗ್ರೆಸ್ ಹಾಗೂ ಇತರ ವಿಪಕ್ಷ ನಾಯಕರು ಬಿಜೆಪಿ ಆರೋಪಗಳನ್ನು ತಿರಸ್ಕರಿಸಿದ್ದು, ರಾಜಕೀಯ ಕಾರ್ಯಕ್ರಮಗಳಲ್ಲಿ ಇಂತಹ ವ್ಯಂಗ್ಯ ಮತ್ತು ಮಿಮಿಕ್ರಿಯನ್ನು ಪ್ರಜಾಸತ್ತಾತ್ಮಕ ಅಭಿವ್ಯಕ್ತಿಯ ಭಾಗವೆಂದು ಸಮರ್ಥಿಸಿಕೊಂಡಿದ್ದಾರೆ. ಹೀಗಾಗಿ ಮೋದಿ ಮಿಮಿಕ್ರಿ ವಿಚಾರ ಇದೀಗ ಬಿಜೆಪಿ-ಕಾಂಗ್ರೆಸ್ ನಡುವಿನ ಹೊಸ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.

Edited By :
PublicNext

PublicNext

20/09/2026 08:09 pm

Cinque Terre

6.36 K

Cinque Terre

9

ಸಂಬಂಧಿತ ಸುದ್ದಿ