ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಹರಿದಾಡುತ್ತಿರುವ ಅವಹೇಳನಕಾರಿ ಆಡಿಯೋ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆಯೇ ಎಂಬ ಪ್ರಶ್ನೆಗೆ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನ್ಯಾಯಾಲಯದಲ್ಲಿ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಾಲಯದ ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ ಈ ಕುರಿತು ತಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕಮಿಷನರ್ ಸ್ಪಷ್ಟಪಡಿಸಿದ್ದಾರೆ. ಕಾನೂನು ಪ್ರಕ್ರಿಯೆ ನಡೆಯುತ್ತಿರುವ ಕಾರಣ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಅವರು ನಿರಾಕರಿಸಿದ್ದಾರೆ.
PublicNext
13/10/2026 01:31 pm
LOADING...