ಮಂಗಳೂರು: ಬೇಕರಿ ಆಹಾರ ಉತ್ಪನ್ನಗಳನ್ನು ಮರುಪ್ಯಾಕ್ ಮಾಡಿ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ನಗರದ ಫಳ್ನೀರ್ ಜಂಕ್ಷನ್‌ನಲ್ಲಿರುವ ಜಿ.ಐ. ಬೇಕರಿ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸಿತು.
ಆರೋಗ್ಯ ಸಚಿವರ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ಸಿಹಿ ತಿಂಡಿ ಹಾಗೂ ತಿನಿಸುಗಳ ತಯಾರಿಕಾ ಘಟಕಗಳು ಮತ್ತು ಮಾರಾಟ ಮಳಿಗೆಗಳ ಪರಿಶೀಲನೆ ನಡೆಸುವ ಕಾರ್ಯಾಚರಣೆಯ ಭಾಗವಾಗಿ ಈ ದಾಳಿ ನಡೆಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಪರಿಶೀಲನೆ ಕೈಗೊಂಡಿತು.
ಪರಿಶೀಲನೆ ವೇಳೆ ಆಹಾರ ಉತ್ಪನ್ನಗಳ ಪ್ಯಾಕೆಟ್‌ಗಳ ಮೇಲೆ ತಯಾರಿಕಾ ದಿನಾಂಕ, ಬಳಕೆಯ ಅವಧಿ ಮುಗಿಯುವ ದಿನಾಂಕ, ಬ್ಯಾಚ್ ಸಂಖ್ಯೆ ಹಾಗೂ ಎಫ್‌ಎಸ್‌ಎಸ್‌ಎಐ ಪರವಾನಗಿ ಸಂಖ್ಯೆ ಸೇರಿದಂತೆ ಅಗತ್ಯ ಮಾಹಿತಿಗಳು ನಮೂದಿಸದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಸಂಬಂಧಿಸಿದ ಆಹಾರ ಉತ್ಪನ್ನಗಳನ್ನು ಅಧಿಕಾರಿಗಳು ವಶಕ್ಕೆ ಪಡೆದು ಸೀಜ್ ಮಾಡಿ ಸೀಲ್ ಮಾಡಿದರು.
ಆಹಾರ ಉತ್ಪನ್ನಗಳನ್ನು ಮರುಪ್ಯಾಕ್ ಮಾಡಿ ಮಾರಾಟ ಮಾಡುವ ಸಂದರ್ಭದಲ್ಲಿ ಆಹಾರ ಸುರಕ್ಷತಾ ನಿಯಮಗಳನ್ನು ಪಾಲಿಸುವುದು ಹಾಗೂ ಪ್ಯಾಕೆಟ್‌ಗಳ ಮೇಲೆ ಅಗತ್ಯ ಮಾಹಿತಿಗಳನ್ನು ಕಡ್ಡಾಯವಾಗಿ ನಮೂದಿಸುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಆಹಾರೋದ್ಯಮಗಳ ಮೇಲೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
PublicNext
18/10/2026 07:44 pm
LOADING...