ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಪೊಲೀಸರ ಭರ್ಜರಿ ಕಾರ್ಯಾಚರಣೆ; 1.1 ಕೋಟಿ ಮೌಲ್ಯದ ಮಾದಕ ದ್ರವ್ಯ ಜಪ್ತಿ

ವಿಜಯಪುರ : ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ವಿಜಯಪುರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ

ಬರೋಬ್ಬರಿ ₹1.1 ಕೋಟಿ ಮೌಲ್ಯದ 200 ಕೆಜಿಗೂ ಅಧಿಕ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

ಹೌದು...

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದ ಹೊಲವೊಂದರಲ್ಲಿ ಅಕ್ರಮವಾಗಿ ಬೆಳೆದಿದ್ದ ₹1.1 ಕೋಟಿ ಮೌಲ್ಯದ 200 ಕೆಜಿಗೂ ಅಧಿಕ ಗಾಂಜಾವನ್ನು ಜಪ್ತಿ ಮಾಡಿ ಶಿವಶಂಕರ ಶರಣಪ್ಪ ಜೀರ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ತನ್ನ ಹೊಲದಲ್ಲಿ ತೊಗರಿ ಬೆಳೆ ಬಿತ್ತನೆ ಮಾಡಿದ್ದು, ಅದರ ಮಧ್ಯದಲ್ಲಿಯೇ 500ಕ್ಕೂ ಹೆಚ್ಚು ಗಾಂಜಾ ಗಿಡಗಳನ್ನು ಬೆಳೆದಿದ್ದ ಎನ್ನಲಾಗಿದೆ. ಈ ಕುರಿತು ಬೀಟ್ ಪೊಲೀಸ್ ಸಿಬ್ಬಂದಿಗೆ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿ ಜಪ್ತಿ ಮಾಡಿಕೊಂಡಿದ್ದಾರೆ.

ಪ್ರಕರಣವನ್ನು ಯಶಸ್ವಿಯಾಗಿ ಭೇದಿಸುವಲ್ಲಿ ಬಸವನಬಾಗೇವಾಡಿ ಡಿವೈಎಸ್‌ಪಿ ಚಂದ್ರಕಾಂತ ನಂದರೆಡ್ಡಿ ಹಾಗೂ ಗುರುಶಾಂತ ದಾಶ್ಯಾಳ ಸೇರಿದಂತೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ತಂಡದ ಕಾರ್ಯವನ್ನು ಶ್ಲಾಘಿಸಿರುವ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಅಧಿಕಾರಿ ಮತ್ತು ಸಿಬ್ಬಂದಿಗೆ ಬಹುಮಾನ ಘೋಷಿಸಿ ಅಭಿನಂದನಾ ಪತ್ರ ನೀಡಿ ಪ್ರಶಂಸಿದರು.

Edited By : Vinayak Patil
PublicNext

PublicNext

18/10/2026 08:45 pm

Cinque Terre

12.56 K

Cinque Terre

0

ಸಂಬಂಧಿತ ಸುದ್ದಿ