ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯರನ್ನ ಇನ್ನು ಮುಂದೆ ಡಾ.ಸಿದ್ದರಾಮಯ್ಯ ಅಂತ ಕರೆಯಬೇಕು. ಶ್ರೀ ದೇವರಾಜ ಅರಸ್ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಿಂದ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗಿದೆ. RL ಜಾಲಪ್ಪ ಜಯಂತಿ ಹಾಗೂ ಸಂಸ್ಥಾಪಕರ ದಿನದ ಕಾರ್ಯಕ್ರಮದಲ್ಲಿ ಡಾಕ್ಟರೇಟ್ ಪ್ರಧಾನ ಮಾಡಲಾಗಿದೆ. ಕಳೆದ ಒಂದು ವರ್ಷದ ಹಿಂದೆಯೇ ಕಾಲೇಜು ಘಟಿಕೋತ್ಸವದಲ್ಲಿ ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಿದ್ದ ಕಾಲೇಜು, ಆದರೆ ಅದನ್ನು ಸ್ವೀಕರಿಸದೆ ಸಿದ್ದರಾಮಯ್ಯ ನಿರಾಕರಿಸಿದ್ದರು. ಇಂದು ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಘೋಷಣೆ ಮಾಡುತ್ತಿದ್ದಂತೆ ಆಶ್ಚರ್ಯ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಕೊನೆಗೆ ಗಣ್ಯರ ಒತ್ತಾಯದ ಮೇರೆಗೆ ಡಾಕ್ಟರೇಟ್ ಸ್ವೀಕಾರ ಮಾಡಿದ್ದಾರೆ.
PublicNext
19/10/2026 06:49 pm
LOADING...