ಕೋಲಾರ: ಜಿಲ್ಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಜಿಲ್ಲಾ ಮಟ್ಟದ ಮೇಲ್ವಿಚಾರಕ ಶ್ರೇಣಿಯ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಬೆಂಗಳೂರು ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ನಿರ್ದೇಶಕ ಸೀನಪ್ಪ ಹಾಗೂ ಕೋಲಾರ ಜಿಲ್ಲಾ ನಿರ್ದೇಶಕ ಶಿವಾನಂದ ಆಚಾರ್ಯ ಸಭೆಯನ್ನು ಉದ್ಘಾಟಿಸಿ, ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.
ಸಭೆಯಲ್ಲಿ ಕಾರ್ಯಕರ್ತರು ಅರ್ಧವಾರ್ಷಿಕ ಗುರಿ ಸಾಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಹಾಗೂ ಮೂರನೇ ತ್ರೈಮಾಸಿಕ ಸಭೆಯ ವೇಳೆಗೆ ನಿಗದಿತ ಗುರಿಗಳನ್ನು ಸಾಧಿಸಲು ಶ್ರಮಿಸಬೇಕು ಎಂದು ಪ್ರಾದೇಶಿಕ ನಿರ್ದೇಶಕ ಸೀನಪ್ಪ ಅವರು ತಿಳಿಸಿದರು.
ಪ್ರಗತಿನಿಧಿ ಮತ್ತು ಚಾಲ್ತಿ ಪ್ರಗತಿನಿಧಿ ಸಂಗ್ರಹಕ್ಕೆ ಒತ್ತು ನೀಡುವುದು, ಕಡಿಮೆ ಸದಸ್ಯರನ್ನು ಹೊಂದಿರುವ ಸಂಘಗಳಿಗೆ ಹೊಸ ಸದಸ್ಯರನ್ನು ಸೇರ್ಪಡೆಗೊಳಿಸುವುದು, SK64 ಸುತ್ತೋಲೆಯ ಪ್ರಕಾರ ಕಂತು ಬಾಕಿಯನ್ನು ಕಡಿಮೆ ಮಾಡುವುದು, ವಾತ್ಸಲ್ಯ ಮನೆ ಹಾಗೂ ಕೆರೆಗಳ ಆಯ್ಕೆ ಪ್ರಕ್ರಿಯೆಗೆ ಆದ್ಯತೆ ನೀಡುವುದು ಮತ್ತು ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಕೋಲಾರ ಜಿಲ್ಲೆಯಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.
ಜಿಲ್ಲಾ ಎಂಐಎಸ್ ಯೋಜನಾಧಿಕಾರಿ, ಜಿಲ್ಲೆಯ ಏಳು ತಾಲೂಕುಗಳ ಯೋಜನಾಧಿಕಾರಿಗಳು, ರಿಕವರಿ ಯೋಜನಾಧಿಕಾರಿ ಹಾಗೂ ಎಲ್ಲಾ ತಾಲೂಕುಗಳ ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿ ಉಪಸ್ಥಿತರಿದ್ದರು.
Kshetra Samachara
19/10/2026 09:31 pm
LOADING...