ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಕ್ರಮ ಅಕ್ಕಿ ಸಾಗಾಟ ಜಾಲ ಹಿಡಿದು ಕೊಟ್ಟಿದ್ದೇ ತಪ್ಪಾಯ್ತ?

ಚಿತ್ರದುರ್ಗ : ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿರುವ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿದ ವ್ಯಕ್ತಿಯ ಮೇಲೆ ದಂಧೆಕೋರರ ಗುಂಪು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.

ಚಿತ್ರದುರ್ಗದ ಗಾಂಧಿನಗರದ ಬಳಿ ಆಟೋದಲ್ಲಿ ಸುಮಾರು 5 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಈ ವೇಳೆ ಸ್ಥಳೀಯರಿಂದ ಮಾಹಿತಿ ಪಡೆದ ಯುವ ಕರ್ನಾಟಕ ಸೇನೆಯ ಜಿಲ್ಲಾಧ್ಯಕ್ಷ ರವಿಕುಮಾರ್ ಅವರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅಕ್ಕಿ ಸಮೇತ ಆಟೋವನ್ನು ಜಪ್ತಿ ಮಾಡಲಾಗಿದೆ.

ಇದರ ಸೇಡಿಗಾಗಿ ಅಕ್ಕಿ ದಂಧೆ ನಡೆಸುತ್ತಿರುವ ಆರೋಪಿ ಮುಜ್ಜು ಅವರ ಗುಂಪು ಸೇರಿಕೊಂಡು ತನಗೆ ಹಿಗ್ಗಾಮುಗ್ಗಾ ಥಳಿಸಿದೆ ಎಂದು ರವಿಕುಮಾರ್ ಆರೋಪಿಸಿದ್ದಾರೆ. ಗಾಯಾಳು ರವಿಕುಮಾರ್ ಅವರಿಗೆ ಚಿತ್ರದುರ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Edited By :
PublicNext

PublicNext

20/10/2026 08:10 am

Cinque Terre

9.95 K

Cinque Terre

0

ಸಂಬಂಧಿತ ಸುದ್ದಿ