ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆಎಂಎಫ್ ಹಗರಣ : ನ್ಯಾಯಾಂಗ ತನಿಖೆಗೆ ವೈ.ಎಂ. ಸತೀಶ್ ಆಗ್ರಹ

ಬಳ್ಳಾರಿ : ರಾಬಕೊವಿ ಹಾಲು ಒಕ್ಕೂಟದಲ್ಲಿ ಜಾನುವಾರು ವಿಮೆ ಪರಿಹಾರ ಹಾಗೂ ರೈತ ಕಲ್ಯಾಣ ಟ್ರಸ್ಟ್‌ನ ಹಣ ದುರುಪಯೋಗವಾಗಿದೆ ಎಂಬ ಆರೋಪದ ಕುರಿತು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಕಾಲಮಿತಿಯೊಳಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ ವೈ.ಎಂ. ಸತೀಶ್ ಆಗ್ರಹಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2018ರಿಂದ ರೈತರಿಗೆ ಸೇರಬೇಕಾದ ವಿಮೆ ಪರಿಹಾರವನ್ನು ಬೇರೆ ಖಾತೆಗಳಿಗೆ ವರ್ಗಾಯಿಸಿರುವ ಆರೋಪಗಳಿವೆ. ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಂಡು, ದುರುಪಯೋಗವಾದ ಹಣವನ್ನು ವಸೂಲಿ ಮಾಡಿ ರೈತರಿಗೆ ಮರಳಿಸಬೇಕು ಎಂದು ಒತ್ತಾಯಿಸಿದರು.

“ಭ್ರಷ್ಟಾಚಾರದ ಕ್ಯಾನ್ಸರ್‌ಗೆ ಕಡಿವಾಣವೇ ಇಲ್ಲದಂತಾಗಿದೆ. ವಿಧಾನ ಪರಿಷತ್ತಿನಲ್ಲಿ ಹಲವು ಬಾರಿ ಪ್ರಸ್ತಾಪಿಸಿದರೂ ಪ್ರಯೋಜನವಾಗಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ವರದಿ : ಹೊನ್ನುರಸ್ವಾಮಿ ಕೆ. ಟಿ. ಪಬ್ಲಿಕ್ ನೆಕ್ಸ್ಟ್, ಬಳ್ಳಾರಿ.

Edited By :
PublicNext

PublicNext

20/10/2026 11:22 am

Cinque Terre

7.98 K

Cinque Terre

0

ಸಂಬಂಧಿತ ಸುದ್ದಿ