ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು ಯುವದಸರಾದಲ್ಲಿ ಜಾಸ್ಮಿನ್ ಸ್ಯಾಂಡ್ಲಾಸ್ ಅಬ್ಬರ: ಹಾಡಿಗೆ ಹೆಜ್ಜೆ ಹಾಕಿದ ಯುವಸಮೂಹ

ಮೈಸೂರು : ಭಾರತೀಯ ಪ್ರಖ್ಯಾತ ಗಾಯಕಿ ಜಾಸ್ಮಿನ್ ಸ್ಯಾಂಡ್ಲಾಸ್ ಅವರು ತಮ್ಮ ವಿಶಿಷ್ಟ ಶೈಲಿಯ ಹಾಡುಗಳ ಮೂಲಕ ಯುವ ಜನತೆಯನ್ನು ಮಂತ್ರಮುಗ್ಧರನ್ನಾಗಿಸಿದರು.

ನಗರದ ಉತ್ತನಹಳ್ಳಿ ಜ್ವಾಲಾಮುಖಿ ತ್ರಿಪುರ ಸುಂದರಿ ದೇವಸ್ಥಾನದ ಹತ್ತಿರದ ಮೈದಾನದಲ್ಲಿ ವಿಜೃಂಭಣೆಯಿಂದ ನಡೆಯುತ್ತಿರುವ ಯುವದಸರಾ ಕಾರ್ಯಕ್ರಮದ ಐದನೇ ದಿನವು ಅತ್ಯಂತ ಉತ್ಸಾಹ ಮತ್ತು ಸಂಭ್ರಮದಿಂದ ಕೂಡಿತ್ತು. ಕಾರ್ಯಕ್ರಮದ ವೇದಿಕೆಯಲ್ಲಿ ಜಾಸ್ಮಿನ್ ಸ್ಯಾಂಡ್ಲಾಸ್ ಅವರ ಗಾಯನಕ್ಕೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಯುವಕ-ಯುವತಿಯರು ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದರು. ಸಂಗೀತದ ಅಲೆಗೆ ಇಡೀ ಮೈದಾನವೇ ರೋಮಾಂಚನಗೊಂಡಿದ್ದು, ಮೈಸೂರಿನ ದಸರಾ ಮಹೋತ್ಸವದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿತು.

Edited By : Vinayak Patil
PublicNext

PublicNext

20/10/2026 08:50 pm

Cinque Terre

12.27 K

Cinque Terre

0

ಸಂಬಂಧಿತ ಸುದ್ದಿ